ಅನಾಥ ಮಕ್ಕಳ ದತ್ತು ಸ್ವೀಕಾರ ಕುರಿತು ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಅನಾಥ ಮಕ್ಕಳನ್ನು ದತ್ತು ಸ್ವೀಕಾರ ಮಾಡಲು ಇಚ್ಛಿಸುವರು ದತ್ತು ಸ್ವೀಕಾರ ಕೇಂದ್ರದಲ್ಲಿ ನೋಂದಾಯಿಸಿಕೊಂಡು ಅನಾಥ ಮಕ್ಕಳನ್ನು ದತ್ತು ಪಡೆಯುವ ವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

Advertisement

ಅವರು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಅವರೊಂದಿಗೆ ಚಾಲನೆ ನೀಡಿ ಮಾತನಾಡಿದರು.

ದತ್ತು ಮಾಸಾಚರಣೆಯನ್ನು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಆಚರಿಸುತ್ತಾರೆ. ಮಕ್ಕಳಿಲ್ಲದ ಪೋಷಕರು ದತ್ತು ಸ್ವೀಕಾರ ಕೇಂದ್ರದಲ್ಲಿ ನೋಂದಾಯಿಸಿಕೊಂಡು ಅನಾಥ ಮಕ್ಕಳನ್ನು ಪಡೆಯಬಹುದು ಎಂಬ ಮಾಹಿತಿ ಇನ್ನೂ ಸಾಕಷ್ಟು ಜನಕ್ಕೆ ಗೊತ್ತಾಗಬೇಕು. ಆ ನಿಟ್ಟಿನಲ್ಲಿ ಈ ಜಾಥದ ಮೂಲಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಮಕ್ಕಳನ್ನು ಹೊಂದಿಲ್ಲದವರು ದತ್ತು ಸ್ವೀಕಾರ ಕೇಂದ್ರದಲ್ಲಿ ನೋಂದಾಯಿಸಿಕೊಂಡು ಈ ಅನಾಥ ಮಕ್ಕಳನ್ನು ಲಾಲನೆ ಪೋಷಣೆ ಮಾಡಬಹುದಾಗಿದೆ. ಇನ್ನೂ ಕೇಲವು ಸಂದರ್ಭಗಳಲ್ಲಿ ಕೆಲವು ಮಕ್ಕಳ ಪೋಷಕರು ಅನಾರೋಗ್ಯದಿಂದ ಅಥವಾ ನಾನಾ ಕಾರಣಗಳಿಂದಾಗಿ ಮಕ್ಕಳನ್ನು ಸಾಕುವುದಕ್ಕೆ ಆಗುತ್ತಿರುವುದಿಲ್ಲ. ಅಂತಹ ಪ್ರಸಂಗಗಳಲ್ಲಿ ತಾತ್ಕಾಲಿಕವಾಗಿ ಮಗುವನ್ನು ಪೋಷಕತ್ವದಲ್ಲಿ ಇಟ್ಟುಕೊಂಡು ಮೂಲ ಕುಟುಂಬದ ಪರಿಸ್ಥಿತಿ ಸುಧಾರಿಸಿದ ಮೇಲೆ ಮರಳಿ ಮಕ್ಕಳನ್ನು ಅಲ್ಲಿಗೆ ಕಳುಹಿಸುವ ವ್ಯವಸ್ಥೆ ಇರುತ್ತದೆ. ಎಷ್ಟೋ ಸಂದರ್ಭದಲ್ಲಿ ಮಗುವಿಗೆ ಕುಟುಂಬದ ಅವಶ್ಯಕತೆ ಇರುತ್ತದೆ ಹಾಗೂ ಪೋಷಕರಿಗೆ ಮಗು ಬೇಕಾಗಿರುತ್ತದೆ. ಹಾಗಾಗಿ ಈ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿದಾಗ ಅನಾಥ ಮಕ್ಕಳು ಹಾಗೂ ಮಕ್ಕಳಿಲ್ಲದವರಿಗೆ ಸಹಾಯಕವಾಗುತ್ತದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಜಾಥಾ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಟಿಪ್ಪು ಸುಲ್ತಾನ್ ವೃತ್ತದವರೆಗೆ ಸಂಚರಿಸಿ, ವಿವಿಧ ಪೋಷಣೆಗಳನ್ನು ಕೂಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ನಿರೂಪಣಾಧಿಕಾರಿ ರಾಧ ಮನ್ನೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರು, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಯದೇವಿ ಕವಲೂರು, ಸದಸ್ಯರಾದ ಬಸವರಾಜ ಸಂಶಿ, ಡಿ.ಐ ಈರಗಾರ, ಎಸ್.ಆರ್. ಬ್ಯಾಹಟ್ಟಿ, ಬಾಲಕರ ಬಾಲಮಂದಿರ ಅಧೀಕ್ಷಕರಾದ ಗಿರಿಜಾ  ದೊಡ್ಡಮನಿ ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here