ಗದಗ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಅವರು ಸರ್ಕಾರಿ ಮತ್ತು ಅನುದಾನಿತ ಶಾಲಾ ಮುಖ್ಯಸ್ಥರೊಂದಿಗೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಶಾಲಾ ಮಕ್ಕಳನ್ನು ಕರೆತರುವಂತೆ ಸೂಕ್ತ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ಶಿಕ್ಷಣ ಇಲಾಖೆಯ ಉಪ ಸಮನ್ವಯಾಧಿಕಾರಿ ಎಂ.ಎಚ್. ಕಂಬ್ಳಿ ಸೇರಿದಂತೆ ಶಾಲಾ ಮುಖ್ಯಸ್ಥರು ಹಾಜರಿದ್ದರು.
Trending Now



