ವಿಜಯಸಾಕ್ಷಿ ಸುದ್ದಿ, ಗದಗ : ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಕರೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ, ಡಯಟ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗದಗ ಶಹರ ವತಿಯಿಂದ ನಗರದ ಎಸ್.ಎಂ. ಕೃಷ್ಣ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-12ರಲ್ಲಿ ಆಯೋಜಿಸಿದ್ದ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಠ್ಯ-ಪುಸ್ತಕ, ಸಮವಸ್ತç, ಬಿಸಿಯೂಟ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ನುಡಿದರು.
ಉಪನಿರ್ದೇಶಕ ಎಂ.ಎ. ರಡ್ಡೇರ ಪ್ರಾಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಜಿಲ್ಲೆಯ ಎಲ್ಲ ಶಾಲೆಗಳಿಗೆ ಪಠ್ಯ-ಪುಸ್ತಕ ಹಾಗೂ ಸಮವಸ್ತçಗಳನ್ನು ಪೂರೈಕೆ ಮಾಡಲಾಗಿದೆ. ಇಂದಿನ ದಿನವೇ ಪ್ರಾರಂಭೋತ್ಸವ ಮಾಡಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವಂತೆ ಎಲ್ಲ ಪ್ರಧಾನ ಗುರುಗಳಿಗೆ ತಿಳಿಸಲಾಗಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಹಾಜರಾಗುವಂತೆ ನೋಡಿಕೊಂಡು ಸರಕಾರದ ಹಾಗೂ ಇಲಾಖೆಯ ಉತ್ತೇಜಕಗಳನ್ನು ಮಕ್ಕಳಿಗೆ ತಲುಪಿಸುವಂತೆ ಮಾಡಿ ಹಾಜರಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆಯೆಂದು ತಿಳಿಸಿದರು.
ಡಯಟ್ ಪ್ರಾಚಾರ್ಯ ಜಿ.ಎಲ್. ಬಾರಾಟಕ್ಕೆ, ಡಿವೈಪಿಸಿ ಎಂ.ಎಚ್. ಕಂಬಳಿ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಎಸ್.ಡಿ. ಕನವಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ರಾ.ಸ.ನೌ.ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜಿಕರ, ಗದಗ ತಾ.ಪಂ ಕಾ.ನಿ ಅಧಿಕಾರಿ ಮಾಣಿಕರಾವ್, ಪ್ರೌ.ಶಾ.ಶಿ.ಸಂಘದ ಅಧ್ಯಕ್ಷ ಪಿ.ಎಚ್. ಕಡಿವಾಲ, ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ವಿ.ಎಂ. ಹಿರೇಮಠ, ಕೊಟ್ರೇಶ ವಿಭೂತಿ, ವಿವೇಕಾನಂದಗೌಡ ಪಾಟೀಲ, ಎಚ್.ಆರ್. ಕೋಣಿಮನಿ, ನಾಗರಳ್ಳಿ, ಶಾಲೆಯ ಶಿಕ್ಷಕ-ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿ.ಜಿ. ಪಾಟೀಲ ಪ್ರಾರ್ಥಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಸ್ವಾಗತಿಸಿದರು. ಶ್ರೀಯಾ ಸುಲ್ತಾನಪುರ, ಶಿವಾನಿ ಸಂಗಮದ ವಿದ್ಯಾರ್ಥಿನಿಯರು ಸಂವಿಧಾನ ಪೀಠಿಕೆ ಓದಿದರು. ಶಿಕ್ಷಕ ಹುಯಿಲಗೋಳ ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್. ವಿದ್ಯಾರ್ಥಿಗಳಿಗೆ ಸಮವಸ್ತç ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ಸಂಯಮ ಕಲಿಸುವುದರ ಜೊತೆಗೆ ಅಕ್ಷರದ ಮೂಲಕ ಅರಿವು ಮೂಡಿಸಿ ಭವ್ಯ ಭಾರತದ ಉತ್ತಮ ನಾಗರಿಕರಾಗುವಂತೆ ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ. ಕಾಯಾ-ವಾಚಾ-ಮನಸಾ ಕಾರ್ಯನಿರ್ವಹಿಸಬೇಕೆಂದರು.



