HomeDharwadಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಹಾಯವಾಣಿ ಕೇಂದ್ರ ಆರಂಭ

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಹಾಯವಾಣಿ ಕೇಂದ್ರ ಆರಂಭ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಅತಿವೃಷ್ಟಿ ಹಾಗೂ ಪ್ರಕೃತಿ ವಿಕೋಪದ ತುರ್ತು ಸಂದರ್ಭಗಳಲ್ಲಿ ಜಿಲ್ಲೆಯ ನಾಗರಿಕರು ಹಾಗೂ ಮಹಾನಗರದ ಸಾರ್ವಜನಿಕರು ಸಂಪರ್ಕಿಸಲು ಅನುಕೂಲವಾಗುವಂತೆ ಡಿಸಿ ಕಚೇರಿ, ಎಲ್ಲ ತಾಲೂಕುಗಳ ತಹಸೀಲ್ದಾರ ಕಚೇರಿಗಳಲ್ಲಿ ಹಾಗೂ ಮಹಾನಗರ ಪಾಲಿಕೆಯಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ತುರ್ತು ಅಗತ್ಯತೆಗಳಲ್ಲಿ ಸಾರ್ವಜನಿಕರು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ, ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಹೆಚ್ಚಾದಾಗ ನೆರೆ ಹಾವಳಿ ಮತ್ತು ಬೆಣ್ಣಹಳ್ಳ, ತುಪ್ಪರಿ ಹಳ್ಳದ ಅಚ್ಚುಕಟ್ಟು ಪ್ರದೇಶಗಳಲ್ಲಿ ಪ್ರವಾಹ ಭೀತಿಯುಂಟಾಗುವ ಸಂಭವವಿದೆ ಎಂದು ಅವರು ತಿಳಿಸಿದ್ದಾರೆ.

ಕಾರಣ, ಜಿಲ್ಲೆಯಲ್ಲಿ ನೆರೆ ಹಾವಳಿ, ಪ್ರವಾಹ ಅಥವಾ ಇನ್ನಿತರೆ ಅವಘಡಗಳಿಗೆ ಸಂಬಂಧಿಸಿದಂತೆ ತುರ್ತು ಸಹಾಯಕ್ಕಾಗಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ, ಉಪವಿಭಾಗಾಧಿಕಾರಿಗಳ ಕಛೇರಿ ಮತ್ತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ದಿನ 24 ಗಂಟೆ ಕಾರ್ಯನಿರ್ವಹಿಸಲು ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಸಹಾಯವಾಣಿ ಕೇಂದ್ರಗಳು ನಿರಂತರವಾಗಿ ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತವೆ. ರಾತ್ರಿ-ಹಗಲು ಕರ್ತವ್ಯ ನಿರ್ವಹಿಸಲು ಅಗತ್ಯ ಸಿಬ್ಬಂದಿಗಳನ್ನು ಈಗಾಗಲೇ ನೇಮಿಸಲಾಗಿದೆ. ದೂರು ಬಂದ ತಕ್ಷಣ ಕರ್ತವ್ಯದಲ್ಲಿರುವ ಸಿಬ್ಬಂದಿಗಳು ಸಂಬAಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿ, ಸಮಸ್ಯೆ ಪರಿಹರಿಸಲು ಕ್ರಮವಹಿಸುತ್ತಾರೆ. ಇದಕ್ಕೆ ಸಂಭಂದಿಸಿದ ವಿವರಗಳನ್ನು ದಾಖಲಿಸಿ, ಮೇಲಾಧಿಕಾರಿಗಳ ಗಮನಕ್ಕೆ ತರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಸಹಾಯವಾಣಿ ಕೇಂದ್ರಗಳ ವಿವರ

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ-0836 2445508ಗೆ ಅಥವಾ ಟೋಲ್ ಫ್ರೀ ಸಂಖ್ಯೆ: 1077ಗೆ ಹಾಗೂ ಮಹಾನಗರಪಾಲಿಕೆಯ ಸಹಾಯವಾಣಿ ಸಂಖ್ಯೆ: 0836 2213888, 0836 2213889 ಮತ್ತು 0836 2213869ಗೆ ಕರೆ ಮಾಡಿ, ತಿಳಿಸಬಹುದು.

ಉಪವಿಭಾಗಾಧಿಕಾರಿಗಳು ಕಚೇರಿ- 0836-2233860, ತಹಸೀಲ್ದಾರರ ಕಾರ್ಯಾಲಯ ಧಾರವಾಡ- 0836-2233822, ಅಳ್ನಾವರ-0836-2385544, ಹುಬ್ಬಳ್ಳಿ ನಗರ-0836-2358035, ಹುಬ್ಬಳ್ಳಿ-0836-2233844, ಕಲಘಟಗಿ-08370-284535, ಕುಂದಗೋಳ-08304-290239, ನವಲಗುಂದ 08380-229240 ಮತ್ತು ಅಣ್ಣಿಗೇರಿ- 8618442759 ಈ ಸಹಾಯವಾಣಿಗಳಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!