ಹಳ್ಳಿಗಳಲ್ಲಿ ಪ್ರವಾಹದ ಬಗ್ಗೆ ಜಾಗೃತಿ ಮೂಡಿಸಿ : ದಿವ್ಯ ಪ್ರಭು

0
District Disaster Management Authority meeting
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲೆಯ ಎರಡು ಪ್ರಮುಖ ಹಳ್ಳಗಳಾದ ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಹರಿಯುವ ಮಾರ್ಗದ ಗ್ರಾಮಗಳಲ್ಲಿ ಪ್ರವಾಹದ ಕುರಿತು ಜಾಗೃತಿ ಮೂಡಿಸಬೇಕು ಮತ್ತು ಪ್ರವಾಹ ಉಂಟಾದಲ್ಲಿ ಜನ-ಜಾನುವಾರು ರಕ್ಷಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

Advertisement

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಿ ಮಾತನಾಡಿದರು.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ. ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಪ್ರವಾಹ ಉಂಟುಮಾಡಬಹುದು. ತಹಸೀಲ್ದಾರರು ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹದಿಂದ ಹಾನಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಆರೋಗ್ಯ ಇಲಾಖೆ ಗ್ರಾಮಗಳಲ್ಲಿ ಫಾಗಿಂಗ್ ವ್ಯವಸ್ಥೆ ಮಾಡಬೇಕು. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ಜೂನ್ 12 ರವರೆಗೆ 1.17 ಲಕ್ಷ ಹೆಕ್ಟರ್ ಭೂಮಿ ಬಿತ್ತನೆ ಆಗಿದೆ. ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಆಗಿರುವ ಬೆಳೆಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಅಗತ್ಯ ಸಲಹೆಗಳನ್ನು ರೈತರಿಗೆ ನೀಡಬೇಕೆಂದು ಅವರು ಹೇಳಿದರು.

ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 56243 ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳ ಬೇಡಿಕೆ ಇದ್ದು, ಏಪ್ರಿಲ್‌ನಿಂದ ಇಲ್ಲಿಯವರೆಗೆ 56243 ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳು ಮಾರಾಟವಾಗಿದೆ. ಈಗ 26298.14 ಮೆಟ್ರಿಕ್ ರಸ ಗೊಬ್ಬರಗಳ ದಾಸ್ತಾನು ಇದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು, ಪಶುಪಾಲನೆ, ಅಗ್ನಿಶಾಮಕ, ಆರೋಗ್ಯ, ಮಹಾನಗರ ಪಾಲಿಕೆ, ಲೋಕೋಪಯೋಗಿ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here