• About
  • Advertise
  • Privacy & Policy
  • Contact
Monday, October 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Dharwad

ಜಂಟಿ ಸಮೀಕ್ಷೆಯನ್ನು ಶೀಘ್ರವೇ ಪೂರ್ಣಗೊಳಿಸಿ : ದಿವ್ಯ ಪ್ರಭು

News Desk by News Desk
September 1, 2024
in Dharwad
0
District Disaster Management Authority meeting
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಧಾರವಾಡ : ಮುಂಗಾರು ಹಂಗಾಮಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಆಗಿರುವ ಕುರಿತು ಕಂದಾಯ ಮತ್ತು ಕೃಷಿ ಇಲಾಖೆ ಮಾಡುತ್ತಿರುವ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ, ವರದಿ ನೀಡಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಶನಿವಾರ ಬೆಳಿಗ್ಗೆ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಆಗಿದೆ. ಈ ಕುರಿತು ಕಂದಾಯ ಮತ್ತು ಕೃಷಿ ಇಲಾಖೆಯಿಂದ ನಡೆದಿರುವ ಜಂಟಿ ಸಮೀಕ್ಷೆಯನ್ನು ಬೇಗನೆ ಪೂರ್ಣಗೊಳಿಸಬೇಕು. ಈ ಕುರಿತು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗದ ವ್ಯಾಪ್ತಿಗೆ ಒಳಪಡುವ ಸುಮಾರು 624 ಕಿ.ಮೀ. ರಸ್ತೆ ಮಳೆಯಿಂದ ಹಾನಿಗೊಳಗಾಗಿದ್ದು, ಇಲಾಖೆಯಲ್ಲಿ ಲಭ್ಯವಿರುವ ಅನುದಾನ ಬಳಸಿಕೊಂಡು ತುರ್ತು ಅಗತ್ಯವಿರುವ ರಸ್ತೆಗಳನ್ನು ದುರಸ್ತಿ ಮಾಡಿ, ವಾಹನ ಸಂಚಾರಕ್ಕೆ ಅನುಕೂಲ ಮಾಡಬೇಕು. ಮತ್ತು 35 ಸೇತುವೆಗಳಿಗೆ ಹಾನಿ ಆಗಿದ್ದು, ರಿಪೇರಿಗೆ ಆದ್ಯತೆ ನೀಡಿ, ಇವುಗಳ ಕುರಿತು ಸಮಗ್ರ ವರದಿಯನ್ನು ಇಲಾಖೆ ಮುಖ್ಯಸ್ಥರಿಗೆ ತಕ್ಷಣ ಸಲ್ಲಿಸಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಮಹತ್ವದಾಗಿದ್ದು, ಕೆಲವು ಇಲಾಖೆ ಅಧಿಕಾರಿಗಳು ಮಾಹಿತಿ ನೀಡದೆ ಗೈರಾಗುವುದು ಅಥವಾ ಬೇರೆ ಅಧಿಕಾರಿ, ಸಿಬ್ಬಂದಿಗಳನ್ನು ಸಭೆಗೆ ನಿಯೋಜಿಸುತ್ತಿರುವುದು ಕಂಡು ಬರುತ್ತಿದೆ. ಗೈರುಹಾಜರಾಗಿರುವ ಅಧಿಕಾರಿಗಳಿಗೆ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ನೋಟಿಸ್ ನೀಡಿ, ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ.ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿ.ಪಂ ಉಪ ಕಾರ್ಯದರ್ಶಿ ಬಿ.ಎಸ್. ಮುಗನೂರಮಠ, ಎಲ್ಲಾ ತಹಸೀಲ್ದಾರರು, ತಾ.ಪಂ ಇಓಗಳು, ಅಗ್ನಿಶಾಮಕ, ಕೃಷಿ, ತೋಟಗಾರಿಕೆ, ಆಹಾರ ಇಲಾಖೆ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪ್ರಶಾಂತ ಪಾಟೀಲ ಮಾತನಾಡಿ, ತುರ್ತು ಕಾಮಗಾರಿ ನಿರ್ವಹಣೆಗೆ ರೂ. 1.16 ಕೋಟಿ ಅನುದಾನ ಬಂದಿದ್ದು, ಆದ್ಯತೆ ಮೇಲೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್. ಕುಕನೂರ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಸುಜಾತಾ ಹಸವೀವ್ಮಠ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಸಂಬAಧಿತ ಇಲಾಖೆಯ ವರದಿ ನೀಡಿದರು.

Tags: dharawadaDistrict Collector Divya PrabhuDistrict Disaster Management Authority meetingGadaggadaganewsLatestNewsupdatenews
Previous Post

ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಮೊದಲ ಹೆಜ್ಜೆ

Next Post

ಬೀಟ್ ರೂಟ್ ಜ್ಯೂಸ್ʼನಿಂದ ಸಿಗುವ ಆರೋಗ್ಯಕರ ಪ್ರಯೋಜನಗಳು ಒಂದೆರಡಲ್ಲ..!

News Desk

News Desk

Next Post
ಬೀಟ್ ರೂಟ್ ಜ್ಯೂಸ್ʼನಿಂದ ಸಿಗುವ ಆರೋಗ್ಯಕರ ಪ್ರಯೋಜನಗಳು ಒಂದೆರಡಲ್ಲ..!

ಬೀಟ್ ರೂಟ್ ಜ್ಯೂಸ್ʼನಿಂದ ಸಿಗುವ ಆರೋಗ್ಯಕರ ಪ್ರಯೋಜನಗಳು ಒಂದೆರಡಲ್ಲ..!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

October 25, 2026
ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

October 25, 2026
ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

October 25, 2026
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

‘ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್!’: ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಗಂಭೀರ ಆರೋಪ

October 25, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

October 25, 2026
ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

October 25, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link