ವಿಜಯಸಾಕ್ಷಿ ಸುದ್ದಿ, ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಅವರ ಅದ್ಯಕ್ಷತೆಯಲ್ಲಿ ಜುಲೈ 22ರಂದು ಬೆಳಿಗೆ 11 ಗಂಟೆಗೆ ಅಣ್ಣಿಗೇರಿ ಪಟ್ಟಣದ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲು ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
Advertisement
ಜುಲೈ 22ರಂದು ಜರಗುವ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಕುಂದು-ಕೊರತೆ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.