ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಜ.25ರಂದು ಬೆಳಿಗ್ಗೆ 10 ಗಂಟೆಗೆ ಗದಗ-ಬೆಟಗೇರಿಯ ಲೋಯೊಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

Advertisement

ವಿ.ಪ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ ಆಗಮಿಸುವರು.

ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ್, ಶಿಕ್ಷಣಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್. ಬಾರಾಟಕ್ಕೆ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಎಫ್. ಪೂಜಾರ, ಕ.ರಾ.ಪ್ರಾ.ಶಾ.ಶಿ ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ಹಿರೇಮಠ, ಕ.ಮಾ.ಶಾ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಕೆ. ಲಮಾಣಿ, ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯ ಕಿರೇಸೂರ, ಕ.ರಾ.ಸ.ಬ.ಪ್ರೌ.ಶಾ.ಶಿ.ಕ್ಷೇ. ಸಂಘದ ಅಧ್ಯಕ್ಷ ಶಿವಾನಂದ ಗಿಡ್ನಂದಿ, ಪ್ರೌಢಶಾಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ. ನಿಂಬನಗೌಡ್ರ, ಕ.ರಾ ಎಸ್.ಸಿ/ಎಸ್‌ಟಿ ಪ್ರಾ.ಮಾ. ಶಾ.ಶಿ.ಕ್ಷೇ ಸಂಘದ ಜಿಲ್ಲಾಧ್ಯಕ್ಷ ವಸಂತ ಕಲಕಂಬಿ, ಕ.ರಾ.ಅ.ಪ್ರಾ.ಶಾ.ಶಿ. ಸಂಘದ ಜಿಲ್ಲಾಧ್ಯಕ್ಷ ರವಿ ಕೋಟಿಯವರ, ವಿಕಲಚೇತನ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಂ. ಶಿರಹಟ್ಟಿ, ಜಿ.ಪಿ.ಟಿ. ಸಂಘದ ಜಿಲ್ಲಾಧ್ಯಕ್ಷ ಹಾಲನಗೌಡ ಪಾಟೀಲ, ಪ್ರೌ.ಶಾ. ದೈ.ಶಿ.ಶಿಕ್ಷಕರ ಸಂಘ ಗ್ರೇ-1 ಜಿಲ್ಲಾಧ್ಯಕ್ಷ ಎಂ.ಎಸ್. ಕುಚಬಾಳ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಜು ಚೌವ್ಹಾಣ ಆಗಮಿಸುವರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಡಯಟ್ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ಜಿ.ಪಂ ಪಿ.ಎಂ. ಪೋಷಣ ಶಕ್ತಿ ನಿರ್ಮಾಣ ಶಿಕ್ಷಣಾಧಿಕಾರಿ ಸರಸ್ವತಿ ಕನವಳ್ಳಿ, ಡಿ.ವೈ.ಪಿ.ಸಿ. ಹಾಗೂ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಎಂ.ಎಚ್.ಕಂಬಳಿ, ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಗದಗ ಶಹರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ್, ನರಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರ, ರೋಣ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎನ್. ಹುರಳಿ, ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಫಡ್ನೀಶಿ, ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಣಕಿ ನಾಯ್ಕ ಅವರುಗಳು ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಸ್ಪರ್ಧೆಗಳ ವಿವರ

5ರಿಂದ 7ನೇ ತರಗತಿಯವರೆಗೆ

ವೈಯಕ್ತಿಕ: ಕಂಠಪಾಠ, ಧಾರ್ಮಿಕ ಪಠಣ, ದೇಶಭಕ್ತಿ ಗೀತೆ, ಕಥೆ ಹೇಳುವುದು, ಪ್ರಬಂಧ, ಚಿತ್ರಕಲೆ, ಅಭಿನಯ ಗೀತೆ, ಕ್ಲೇ ಮಾಡೆಲಿಂಗ್, ಭಕ್ತಿ ಗೀತೆ, ಆಶು ಭಾಷಣ, ಕವನ ವಾಚನ, ಮಿಮಿಕ್ರಿ.

 8ರಿಂದ 12ನೇ ತರಗತಿಯವರೆಗೆ

ವೈಯಕ್ತಿಕ: ಭಾಷಣ, ಧಾರ್ಮಿಕ ಪಠಣ, ಜಾನಪದ ಗೀತೆ, ಭಾವಗೀತೆ, ಭರತನಾಟ್ಯ, ಚಿತ್ರಕಲೆ, ಮಿಮಿಕ್ರಿ, ಚರ್ಚಾಸ್ಪರ್ಧೆ, ರಂಗೋಲಿ, ಗಝಲ್, ಆಶು ಭಾಷಣ, ಕವನ ವಾಚನ, ಪ್ರಬಂಧ

ಸಾಮೂಹಿಕ ವಿಭಾಗ: ಜಾನಪದ ನೃತ್ಯ, ಕ್ವಿಜ್, ಕವಾಲಿ.


Spread the love

LEAVE A REPLY

Please enter your comment!
Please enter your name here