ಸೆ.5ರಂದು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೆ.5ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

Advertisement

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕ ಹಾಗೂ ವಿ.ಪ ಸದಸ್ಯ ಸಲೀಂ ಅಹ್ಮದ್, ಖನಿಜ ಅಬಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಆಗಮಿಸುವರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಆರ್.ಎಸ್. ಬುರಡಿ, ಡಯಟ್‌ದ ಉಪನಿರ್ದೇಶಕಿ(ಅಭಿವೃದ್ಧಿ) ಮಂಗಳಾ ತಾಪಸ್ಕರ್, ಗದಗ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಸಿ.ಕೊರವನವರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಗದಗ ತಹಸೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಶೆಟ್ಟೆಪ್ಪನವರ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ವಿವಿಧ ಶಿಕ್ಷಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಶೇಷ ಆಹ್ವಾನಿತರಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಕರ್ನಾಟಕ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಎಸ್‌ಪಿ ರೋಹನ್ ಜಗದೀಶ್ ಆಗಮಿಸಲಿದ್ದಾರೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಉಪನಿರ್ದೇಶಕ ಡಾ. ಹರಿಪ್ರಸಾದ್ ಜಿ.ವಿ ಉಪನ್ಯಾಸ ನೀಡಲಿದ್ದಾರೆ.


Spread the love

LEAVE A REPLY

Please enter your comment!
Please enter your name here