ಬೆಂಗಳೂರು: ಮುಖ್ಯಮಂತ್ರಿ ಪದಗ್ರಹಣದ ದಿನವೇ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಸಂಪೂರ್ಣವಾಗಿ ಹೊಸದಾಗಿ ನಿರ್ಮಿಸಲು ನಿರ್ಧರಿಸಲಾಗಿದ್ದು, ಪ್ರಮಾಣವಚನ ಸ್ವೀಕಾರದ ನಂತರ ಅದೇ ಸಂಜೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸುವ ಯೋಜನೆ ರೂಪಿಸಲಾಗಿದೆ.
ಇದಕ್ಕೂ ಮುನ್ನ ರೇಸ್ ಕೋರ್ಸ್ ರಸ್ತೆಯ ಸ್ಥಳಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಅಧಿಕಾರಿಗಳೊಂದಿಗೆ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು. ಕುರ್ಚಿಗಳ ವ್ಯವಸ್ಥೆ, ವೇದಿಕೆ ರೂಪುರೇಷೆ ಹಾಗೂ ಪ್ರಮಾಣವಚನ ಸಮಾರಂಭದ ನೇರ ಪ್ರಸಾರದ ವ್ಯವಸ್ಥೆ ಕುರಿತು ಸೂಚನೆಗಳನ್ನು ನೀಡಿದರು.
ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಿಸುವ ಗುರಿಯೂ ಹೊಂದಲಾಗಿದ್ದು, ಅವುಗಳ ಶಂಕುಸ್ಥಾಪನೆ ಮುಂದಿನ ಹಂತದಲ್ಲಿ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.



