ತುಮಕೂರು: ರಾಜ್ಯದಲ್ಲಿ ಸಿಎಂ ಗದ್ದುಗೆ ವಿಚಾರ ಚರ್ಚೆಗೆ ಗ್ರಾಸವಾಗಿರುವ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ತುಮಕೂರಿನ ಕುಣಿಗಲ್ ತಾಲೂಕಿನ ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ-ಹವನ ನಡೆಸಲಾಗಿದೆ.
ಡಿಕೆ ಶಿವಕುಮಾರ್ ಅಭಿಮಾನಿಗಳಿಂದ ಆಯೋಜಿಸಲ್ಪಟ್ಟ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಕುಣಿಗಲ್ ಶಾಸಕ ರಂಗನಾಥ್ ನೇತೃತ್ವ ವಹಿಸಿದರು. ಕಾರ್ಯಕ್ರಮದ ಅಂಗವಾಗಿ ಅಷ್ಟಧ್ರವ್ಯ ಪೂರಕ, ಗಣ ಹೋಮ, ಗುಡಾನ್ನ, ಚೆರುವು ಪೂರಕ, ರುದ್ರಹೋಮ ಹಾಗೂ ಸುದರ್ಶನ ಹೋಮ ನೆರವೇರಿಸಲಾಯಿತು.
ಅಧಿಕಾರ ಪ್ರಾಪ್ತಿ, ರಾಜ್ಯದಲ್ಲಿ ಕಷ್ಟ-ಅಪಾಯ ನಿವಾರಣೆ, ಶನಿ ದೋಷ ಮತ್ತು ರವಿ ಭುಕ್ತಿ ಗ್ರಹದ ಪ್ರಭಾವ ಕಡಿಮೆಯಾಗಲೆಂದು ಪ್ರಾರ್ಥನೆ ಸಲ್ಲಿಸಲಾಯಿತು.
ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗಲೆಂದು ವಿಶೇಷ ಪ್ರಾರ್ಥನೆ ನಡೆಸಲಾಗಿದೆ. ಕಾರ್ಯಕ್ರಮದ ಅಂತ್ಯದಲ್ಲಿ ಭಕ್ತರು 1001 ತೆಂಗಿನಕಾಯಿ ಒಡೆದು ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.



