DK Shivakumar; ವಾರದ ಏಳರಲ್ಲಿ ಮೂರು ದಿನ ಕಾವೇರಿ ಆರತಿ: ಡಿಸಿಎಂ ಡಿಕೆ ಶಿವಕುಮಾರ್

0
Spread the love

ಬೆಂಗಳೂರು:-ಮಂಡ್ಯ ಜಿಲ್ಲೆ ಕೆ ಆರ್ ಎಸ್ ನಲ್ಲಿ ಐತಿಹಾಸಿಕ ಕಾವೇರಿ ಆರತಿಯನ್ನು ಅಭೂತಪೂರ್ಣವಾಗಿ ನೆರವೇರಿಸಿದ ಪಂಡಿತ, ಪುರೋಹಿತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸನ್ಮಾನಿಸಿದರು.

Advertisement

ಮಂಡ್ಯ ಜಿಲ್ಲೆ ಕೆಆರ್ ಎಸ್ ನ ಬೃಂದಾವನ ಉದ್ಯಾನದಲ್ಲಿ ಸತತ 5 ದಿನಗಳ ಕಾಲ ಕಾವೇರಿ ಆರತಿಯಲ್ಲಿ ಪಾಲ್ಗೊಂಡ 55 ಮಂದಿ ಅರ್ಚಕರನ್ನು ಶಿವಕುಮಾರ್ ಅವರು ಕುಮಾರಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಸರಕಾರಿ ನಿವಾಸದಲ್ಲಿ ಶುಕ್ರವಾರ ಫಲ, ತಾಂಬೂಲ, ವಸ್ತ್ರ ನೀಡಿ ಸಾಂಪ್ರದಾಯಿಕವಾಗಿ ಅಭಿನಂದಿಸಿದರು.

ಬಳಿಕ ಮಾತನಾಡಿದ ಅವರು,”ಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ,‌ ಮುಂದುವರೆಸುತ್ತೇವೆ.‌ ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ.‌ ನಾವೆಲ್ಲರೂ ‌ಸೇರಿ ಪ್ರಾರ್ಥನೆ ಸಲ್ಲಿಸೋಣ.‌ ಆರತಿಗಾಗಿ ಸ್ಟೇಡಿಯಂ ಮಾದರಿ ಮಂಟಪ ನಿರ್ಮಾಣ‌‌ ಮಾಡೋಣ‌” ಎಂದರು.

“ಪ್ರತಿ ಶುಕ್ರವಾರ, ಶನಿವಾರ, ಭಾನುವಾರ ಕಾವೇರಿ ಆರತಿ ನಡೆಯಲಿದೆ. ಇದರಿಂದ ಪುರೋಹಿತರಿಗೆ, ಸ್ಥಳೀಯರಿಗೆ ಉದ್ಯೋಗ ದೊರೆಯಬೇಕು. ನಾನು ಅಥವಾ ಇನ್ಯಾರೋ ಪುರೋಹಿತರಾಗಲು ಸಾಧ್ಯವಿಲ್ಲ. ನೀವೇ ಆ ಕೆಲಸವನ್ನು ನಿರ್ವಹಿಸಬೇಕಾಗುತ್ತದೆ. ‌ಬೆಳಿಗ್ಗೆ ಹೊತ್ತು ಭಕ್ತಾಧಿಗಳು ಕಾವೇರಿಗೆ ಪೂಜೆ ಸಲ್ಲಿಸುವ ರೀತಿಯಲ್ಲೂ ವ್ಯವಸ್ಥೆ ಮಾಡಲಾಗುವುದು. ವಾರ ಪೂರ್ತಿ ಆರತಿ ಕಾರ್ಯಕ್ರಮ ನಡೆಯಬೇಕು ಎಂಬುದು ನನ್ನ ಆಸೆಯಾಗಿದೆ” ಎಂದರು.

“ಕಾವೇರಿ ಆರತಿ ಮೂಲಕ ರಾಜ್ಯದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಜೀವನದಿ ಕಾವೇರಿಗೆ ಪೂಜೆ ಸಲ್ಲಿಸುವ ಭಾಗ್ಯ ನಮಗೆ ಹಾಗೂ ನಿಮಗೆ ಸಿಕ್ಕಿದೆ. ಕಾವೇರಿ ಮಾತೆಗೆ ಪ್ರಾರ್ಥನೆ ಸಲ್ಲಿಸಲು ಕೆಲವರು ಅಡಚಣೆ ಮಾಡುತ್ತಿದ್ದಾರೆ. ಅಡಚಣೆ ಮಾಡುವವರಿಗೆ ನಾವು ಏನೂ ಮಾಡಲು ಆಗುವುದಿಲ್ಲ” ಎಂದರು.

“ಕಾವೇರಿ ಆರತಿ ಅತ್ಯುತ್ತಮವಾಗಿ ನೆರವೇರಿದೆ. ಮುಂದಕ್ಕೆ ಯಾವ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕು, ಏನೇನು ತಪ್ಪುಗಳಾಗಿವೆ ಎಂಬುದನ್ನು ಗಮನಿಸಬೇಕು. ಇನ್ನೂ ಯಾವ ರೀತಿಯ ಧಾರ್ಮಿಕ ಕೆಲಸಗಳು ನೆರವೇರಬೇಕು ಎಂಬುದನ್ನು ಗಮನಿಸಬೇಕು. ಭಕ್ತಿ ಪ್ರಧಾನವಾಗಿ ಜನರ ಮನಸ್ಸಿಗೆ ಮುಟ್ಟುವಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ರೂಪಿಸಬೇಕು” ಎಂದರು.


Spread the love

LEAVE A REPLY

Please enter your comment!
Please enter your name here