ಮಡಿಕೇರಿ: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 16ರಂದು ಕೊಡಗು ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ, ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಆಗಸ್ಟ್ 16ರಂದು ಬೆಳಗ್ಗೆ 11 ಗಂಟೆಗೆ ಡಿ.ಕೆ. ಶಿವಕುಮಾರ್ ಅವರು ಭಾಗಮಂಡಲ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲದ ಭಗಂಡೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ನಂತರ ತಲಕಾವೇರಿಗೆ ತೆರಳಲಿರುವ ಮುಖ್ಯಮಂತ್ರಿ, ಕಾವೇರಿ ತಾಯಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಕುರಿತು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಕಾರ್ಯಕ್ರಮದ ವಿವರಗಳನ್ನು ಹಂಚಿಕೊಂಡಿದ್ದಾರೆ.
ಕಳೆದ ವರ್ಷದ ಮಾರ್ಚ್ 21ರಂದು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ತಲಕಾವೇರಿಗೆ ಭೇಟಿ ನೀಡಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಅಲ್ಲಿಂದ ಪವಿತ್ರ ಕಾವೇರಿ ತೀರ್ಥವನ್ನು ಬೆಂಗಳೂರಿಗೆ ಕೊಂಡೊಯ್ದು ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಬಳಸಲಾಗಿತ್ತು.



