ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾಮಹೋತ್ಸವ ಇಂದು 10ನೇ ದಿನಕ್ಕೆ ಕಾಲಿಟ್ಟಿದೆ.

ನರಕ ಚತುರ್ದಶಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಸನಕ್ಕೆ ಭೇಟಿ ನೀಡಿ, ಪತ್ನಿ ಉಷಾ ಅವರೊಂದಿಗೆ ಹಾಸನಾಂಬ ದೇವಿಯ ದರ್ಶನ ಪಡೆದರು.
ಹಾಸನದ ಶಕ್ತಿ ದೇವತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಮುಖ್ಯಮಂತ್ರಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. ಗರ್ಭಗುಡಿಯಲ್ಲಿ ನಿಂತು ಭಕ್ತಿಭಾವದಿಂದ ದೇವಿಯನ್ನು ಪ್ರಾರ್ಥಿಸಿದರು. ಮುಖ್ಯಮಂತ್ರಿಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಹಾಸನಾಂಬ ದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹಾಗೂ ಸಂಸದ ಶ್ರೇಯಸ್ ಪಟೇಲ್ ಸಾಥ್ ನೀಡಿದರು.
ಹಾಸನಾಂಬ ದೇವಿಯ ದರ್ಶನದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಮಹಾನಗರಪಾಲಿಕೆ ವಸ್ತುಪ್ರದರ್ಶನ ಮೈದಾನಕ್ಕೆ ತೆರಳಿದರು. ಅಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನ ಹಾಗೂ ಹಾಸನಾಂಬ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಇದಾದ ಬಳಿಕ ಬೀಕನಹಳ್ಳಿ ಗ್ರಾಮದ ಪುರದಮ್ಮ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವಿಗೆ ಪೂಜೆ ಸಲ್ಲಿಸಿದರು.










