ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿಕೆ ಸುರೇಶ್

0
Spread the love

ಬೆಂಗಳೂರು: ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಬಮೂಲ್ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು,

Advertisement

ಬೆಂಗಳೂರು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಅಂತ ಪಕ್ಷದ ಮುಖಂಡರು ತೀರ್ಮಾನ ಮಾಡಿದ್ದಾರೆ‌. ಅದರಂತೆ ಇವತ್ತು ನಾಮಪತ್ರ ಸಲ್ಲಿಕೆಗೆ ಹೋಗ್ತೇನೆ ಎಂದರು.

ಈಗಲೂ ನಾನು ರೆಸ್ಟ್ ಮೂಡ್​​ನಲ್ಲೇ ಇದ್ದೇನೆ. ಪಕ್ಷದ ಮುಖಂಡರಿಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಕೆಲವು ವಿಚಾರದಲ್ಲಿ ಅವರ ಮಾತಿಗೂ ನಾವು ಗೌರವ ಕೊಡಬೇಕಾಗುತ್ತದೆ. ಆ ನಿಟ್ಟಿನಲ್ಲಿ ಮಾರ್ಗದರ್ಶನವನ್ನು ಕೊಟ್ಟಿದ್ದಾರೆ.

ಅದರಂತೆ ಇವತ್ತು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ. ಮುಂದೆ ನೋಡೋಣ. ಪಕ್ಷದ ಮುಖಂಡರು, ಜಿಲ್ಲೆಯ ನಾಯಕರು ಅವರ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ನಾನೊಬ್ಬ ಪಕ್ಷದ ಕಾರ್ಯಕರ್ತನಾಗಿ ಅವರ ಮಾತುಗಳಿಗೆ, ನಾಯಕರ ಸೂಚನೆಗೆ ತಲೆಬಾಗಬೇಕಾಗುತ್ತದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here