DK Suresh: ನಾನು ಡಿಕೆ ಸುರೇಶ್ ಪತ್ನಿ ಎಂದು ವಿಡಿಯೋ ಮಾಡಿದ್ದ ಮಹಿಳೆ ಅರೆಸ್ಟ್!

0
Spread the love

ರಾಮನಗರ: ಮಾಜಿ ಸಂಸದ ಡಿ.ಕೆ ಸುರೇಶ್ ನನ್ನ ಗಂಡ ಹಾಗೂ ನಾನು ಅವರ ದೊಡ್ಡ ಅಭಿಮಾನಿ ಅಂತ ಹೇಳಿಕೊಂಡು ಮಹಿಳೆಯೊಬ್ಬರು ಫೇಸ್​ ಬುಕ್​​ನಲ್ಲಿ ವಿಡಿಯೋ ಶೇರ್‌ ಮಾಡಿದ್ದರು. ಇದೀಗ ರಾಮನಗರ ಸೆನ್ ಠಾಣೆಯಲ್ಲಿ ಎಫ್ಐಆರ್​​ ದಾಖಲಾಗಿದೆ. ​ಡಿ.ಕೆ.ಸುರೇಶ್ ಪರ ವಕೀಲ ಪ್ರದೀಪ್​​ರಿಂದ ದೂರು ಹಿನ್ನೆಲೆ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಮಹಿಳೆ ಪವಿತ್ರ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಡಿಕೆ ಸುರೇಶ್ ಫೋಟೋದೊಂದಿಗೆ ಮಹಿಳೆ ತನ್ನ ಫೋಟೋವನ್ನು ಎಡಿಟ್ ಮಾಡಿ ಏ.8 ರಂದು ಫೇಸ್ ಬುಕ್, ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಈ ಸಂಬಂಧ ಡಿ.ಕೆ.ಸುರೇಶ್ ವಿರುದ್ಧ ದುರುದ್ದೇಶದಿಂದ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಕೀಲ ಪ್ರದೀಪ್​​ ದೂರು ನೀಡಿದ್ದರು.

ಮಹಿಳೆ ಡಿಕೆ ಸುರೇಶ್ ರವರ ಪತ್ನಿ ಎಂಬ ಸೋಗಿನಲ್ಲಿ ಅಪಪ್ರಚಾರ ಮಾಡುತ್ತಿದ್ದು, ಇದರಿಂದ ಸಾರ್ವಜನಿಕವಾಗಿ ತಪ್ಪು ಸಂದೇಶವನ್ನು ಹಬ್ಬಿಸುತ್ತಿದ್ದಾರೆ. ಸುಳ್ಳು ಮಾಹಿತಿಯನ್ನು ನಿಜವೆಂದು ಸಾರ್ವಜನಿಕರು ನಂಬುವಂತೆ ಕೇಡುಬಯಸುವ ದುರುದ್ದೇಶದಿಂದ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಳ್ಳಲಾಗಿದೆ. ಆದ್ದರಿಂದ ಮಹಿಳೆ ವಿರುದ್ಧ ಕಲಂ 319, 237, 336, 353 ಬಿ.ಎನ್.ಎಸ್ ಹಾಗೂ 66(ಡಿ) ಐ.ಟಿ ಆಕ್ಟ್ ಅಡಿಯಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ವಕೀಲ ಪ್ರದೀಪ್​​ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here