ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರಾ ಡಿಕೆಶಿ!? ಸುರ್ಜೇವಾಲಾ ಹೇಳಿದ್ದೇನು!?

0
Spread the love

ಬೆಳಗಾವಿ:- ರಾಜ್ಯ ರಾಜಕೀಯದಲ್ಲಿ ಹೆಚ್ಚು ಚರ್ಚೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ಕೊಟ್ಟಿದ್ದಾರೆ.

Advertisement

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನು ಅಲ್ಲಗಳೆದಿದ್ದಾರೆ.

ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು ಈ ರೀತಿ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಯಾವ ಸಚಿವರಿಗೂ ಯಾವ ನಾಯಕರಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದರು.

ಅಲ್ಲದೆ, ಕಾಂಗ್ರೆಸ್ ಆಂತರಿಕ ಸಂಘರ್ಷ ಸಂಬಂಧಿತ ವದಂತಿಗಳನ್ನು ಬಿಜೆಪಿ ನಾಯಕರು ಹರಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಬಿಜೆಪಿ ಪ್ರಾಯೋಜಿತ ಆಧಾರರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದೂ ಮನವಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರ ಬದಲಾವಣೆ ಮಾಡುತ್ತಿದ್ದರೆ ಇಲ್ಲೇಕೆ ಬರುತ್ತಿದ್ದರು ಎಂದು ಮರು ಪ್ರಶ್ನಿಸಿದರು.

ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ಬಹಿರಂಗ ಹೇಳಿಕೆ ನೀಡಿದ್ದಕ್ಕೆ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವದಂತಿ ಗುರುವಾರ ಹರಡಿತ್ತು. ಇದೀಗ ಈ ವಿಚಾರವಾಗಿ ಖುದ್ದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯೇ ಸ್ಪಷ್ಟನೆ ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here