ದೆಹಲಿಯಲ್ಲಿ ಡಿಕೆಶಿ ಗ್ಯಾರಂಟಿ ಠುಸ್‌ ಪಟಾಕಿ ಆಗಿದೆ: BY ವಿಜಯೇಂದ್ರ ವ್ಯಂಗ್ಯ!

0
Spread the love

ಬೆಂಗಳೂರು:- ದೆಹಲಿಯಲ್ಲಿ ಡಿಕೆಶಿ ಗ್ಯಾರಂಟಿ ಠುಸ್‌ ಪಟಾಕಿ ಆಗಿದೆ ಎಂದು BY ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

Advertisement

ದೆಹಲಿ ಚುನಾವಣಾ ಫಲಿತಾಂಶದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕಾಂಗ್ರೆಸ್‌ ಹ್ಯಾಟ್ರಿಕ್‌ ಸಾಧನೆ ಮಾಡಿದೆ. ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ಅಲ್ಲದೇ ದೆಹಲಿಯಲ್ಲಿ ಡಿಕೆಶಿ ಗ್ಯಾರಂಟಿ ಠುಸ್‌ ಪಟಾಕಿ ಆಗಿದೆ ಎಂದರು.

ಮೋದಿಗೆ ಪರ್ಯಾಯ ನಾಯಕನನ್ನ ಕೊಡ್ತೀವಿ ಅಂತ ಬಿಂಬಿಸಿಕೊಳ್ಳುವ ಕಾಂಗ್ರೆಸ್‌ಗೆ ಲೋಕಸಭಾ ಚುನಾವಣೆ, ಹರಿಯಾಣ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಲ್ಲಿ ಮುಖಭಂಗ ಆಗಿತ್ತು. ಈಗ ಕಾಂಗ್ರೆಸ್‌ ಸ್ಥಿತಿ ಏನು ಅಂತ ಜನ ತೋರಿಸಿಕೊಟ್ಟಿದ್ದಾರೆ ಎಂದು ತಿವಿದರು.

ಇನ್ನೂ ದೆಹಲಿಯಲ್ಲಿ ಗ್ಯಾರಂಟಿ ಪ್ರಚಾರಕ್ಕೆ ಡಿಕೆ ಶಿವಕುಮಾರ್‌ ಅವರೇ ಹೋಗಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿ, ಗ್ಯಾರಂಟಿಗಳೆಲ್ಲವೂ ತಾತ್ಕಾಲಿಕ. ನಮ್ಮ ರಾಜ್ಯದಲ್ಲೇ ಮೈಕ್ರೋ ಫೈನಾನ್ಸ್‌ನಿಂದ ಏನಾಗ್ತಿದೆ ಎಂಬುದನ್ನು ಜನ ನೋಡ್ತಿದ್ದಾರೆ. ಹಾಗಾಗಿ ದೆಹಲಿಯ ಪ್ರಬುದ್ಧ ಮತದಾರರು ಅರ್ಥಮಾಡಿಕೊಂಡಿದ್ದಾರೆ. ತಾತ್ಕಾಲಿಕ ಗ್ಯಾರಂಟಿಗಿಂತ ನರೇಂದ್ರ ಮೋದಿ ಅವರ ದೃಢ ನಾಯಕತ್ವ ಹೊಂದಿರುವ ಬಿಜೆಪಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಜನ ಅರ್ಥಮಾಡಿಕೊಂಡಿದ್ದಾರೆ. ಇದರಿಂದ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದು ದೆಹಲಿ ಜನತೆಗೆ ಧನ್ಯವಾದ ಅರ್ಪಿಸಿದರು.


Spread the love

LEAVE A REPLY

Please enter your comment!
Please enter your name here