ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳು ಹಾಳಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಈ ಸಂಬಂಧ ಐಟಿ ಕಂಪನಿಗಳು ಕೂಡ ಅಸಮಾಧಾನ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರು ತೊರೆಯುವುದಾಗಿ ಲಾಜಿಸ್ಟಿಕ್ಸ್ ಸ್ಟಾರ್ಟ್ಅಪ್ ಕಂಪನಿ ಬ್ಲ್ಯಾಕ್‌ಬಕ್ ಬಹಿರಂಗವಾಗಿಯೇ ಹೇಳಿದೆ.
ಈ ಬಗ್ಗೆ ಮಾತನಾಡಿದ ಡಿಕೆಶಿ, ಸರ್ಕಾರಕ್ಕೆ ಬೆದರಿಸಲು, ಬ್ಯಾಕ್‌ಮೇಲ್ ಹಾಕುವುದು ಪ್ರಯೋಜನೆವಿಲ್ಲ. ಇದನ್ನೂ ನಾವು ಸಹ ಕೇರ್ ಮಾಡಲ್ಲ. ಈ ಮೂಲಕ ಬೆಂಗಳೂರು ತೊರೆಯುತ್ತೇವೆ ಎಂಬ ಕಂಪನಿಗಳ ನಡೆಗೆ ಸಿಡಿಮಿಡಿಗೊಂಡಿದ್ದಾರೆ.
ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನೀಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಬಗ್ಗೆ ತೃಪ್ತಿ ಇಲ್ಲವೆಂದು ಹೋಗೋರನ್ನ ತಡೆಯಲ್ಲ. ಕಂಪನಿಗಳು ತಮ್ಮ ಸ್ಥಳವನ್ನು ಬದಲಾಯಿಸುವ ನಿರ್ಧಾರವು ವ್ಯಾಪಾರ ಸಮಸ್ಯೆಗಳ ಕಾರಣದಿಂದಾಗಿರಬಹುದು ಎಂದು ಖಾರವಾಗಿ ಹೇಳಿದ್ದಾರೆ.
ಬೆಂಗಳೂರಿನ ಇತಿಹಾಸದಲ್ಲಿ ಮೊದಲ ಬಾರಿಗೆ 112 ಕಿ.ಮೀ. ಫ್ಲೈಓವರ್‌ಗಳು ಮತ್ತು 44 ಕಿ.ಮೀ.ಗಿಂತ ಹೆಚ್ಚು ಎತ್ತರದ ಡಬಲ್ ಡೆಕ್ಕರ್ ರಸ್ತೆಗಳನ್ನು ನಿರ್ಮಿಸುತ್ತಿದ್ದೇವೆ. ಈ ಕೆಲಸ ಶೀಘ್ರದಲ್ಲಿಯೇ ಮುಕ್ತಾಯವಾಗಲಿವೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ ಮತ್ತು ಪ್ರತಿದಿನ ನೂರಾರು ಕಂಪನಿಗಳು ಇಲ್ಲಿಗೆ ಬರುತ್ತಿವೆ ಎಂದು ತಿಳಿಸಿದರು.