ಅಳತೆಗೆ ತಕ್ಕಂತೆ ಕೆಲಸ ನಿರ್ವಹಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನ ಅಂತೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಚಾಲನೆ ನೀಡಿದರು.

Advertisement

ನರೇಗಾ ಯೋಜನೆಯ `ವಲಸೆ ಯಾಕ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ’, `ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ’ ಎಂಬ ಶೀರ್ಷಿಕೆಯಡಿ ಎಪ್ರಿಲ್ 1ರಿಂದ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಬ್ಬ ನೋಂದಾಯಿತ ಕೂಲಿಕಾರರಿಗೆ ನಿರಂತರವಾಗಿ 100 ದಿನಗಳ ಕೆಲಸ ಪಡೆಯುವ ಅವಕಾಶ ನೀಡಲಾಗಿದ್ದು, ನಮೂನೆ -6ರಲ್ಲಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಕೆಲಸ ಪಡೆಯಬಹುದು. ಪ್ರಸ್ತುತ ಆರ್ಥಿಕ ವರ್ಷದ ಕೂಲಿ ಮೊತ್ತದಲ್ಲಿ ಭಾರೀ ಏರಿಕೆ ಕಂಡಿದ್ದು, 349 ರೂಗಳಿದ್ದ ಕೂಲಿ ಮೊತ್ತ ರೂ 370ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಚೀಟಿಯ ಮಹತ್ವ, ದೊರೆಯುವ ಸೌಲಭ್ಯವನ್ನು ಪಡೆಯಲು ನಿಯಮಾನುಸಾರ ಕೂಲಿ ಕಾರ್ಮಿಕರು ಮಾಡಬೇಕಾದ ಕೆಲಸ ನಿರ್ವಹಣೆ, ಗಂಡು ಮತ್ತು ಹೆಣ್ಣಿಗೆ ಸಮಾನ ಕೂಲಿ ನೀಡುವದು ಇತ್ಯಾದಿ ಮಾಹಿತಿ ತಿಳಿಸಿದರಲ್ಲದೆ, ಅಳತೆಗೆ ತಕ್ಕಂತೆ ಕೆಲಸ ನಿರ್ವಹಣೆ ಮಾಡಿದರೆ ಮಾತ್ರ ಪೂರ್ಣ ಪ್ರಮಾಣದ ಕೂಲಿ ಮೊತ್ತ ಲಭ್ಯವಾಗುತ್ತದೆ ಎಂದು ತಿಳಿಸಿದರು.

ಸಹಾಯಕ ನಿರ್ದೇಶಕ ಕುಮಾರ ಪೂಜಾರ ಮಾತನಾಡಿ, ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಈಗ ಅಪ್ಲಿಕೇಶನ್ ಗಮನ ಸೆಳೆದಿದೆ. ಕೇಂದ್ರ ಸರ್ಕಾರ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ (ಓಒಒS) ಅಪ್ಲಿಕೇಶನ್ ಕಡ್ಡಾಯಗೊಳಿಸಿದೆ. ಇದರಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಹಾಜರಾತಿಗಳನ್ನು ಜಿಯೋ ಟ್ಯಾಗ್ ಫೋಟೋಗ್ರಾಫ್ ಮುಖಾಂತರ ಪ್ರತಿ ದಿನ ಎರಡು ಬಾರಿ ಕಡ್ಡಾಯವಾಗಿ ಸೆರೆಹಿಡಿಯಲು ಸೂಚಿಸಿದರು.

ಪಂಚಾಯತ ಅಭಿವೃದ್ಧಿ ಅಧಿಕಾರಿ ಎಚ್.ಎಸ್ ಚಟ್ರಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡವರಿಗೆ, ಶ್ರಮಿಕರಿಗೆ ನರೇಗಾ ಯೋಜನೆಯು ವರದಾನವಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ, ಜೊತೆಗೆ ಸಮಾನ ಕೆಲಸ. ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ, ತೃತೀಯ ಲಿಂಗಿಗಳಿಗೂ ಕೆಲಸ ನೀಡಲಾಗುತ್ತಿದೆ ಎಂದರು.

ಕಾಮಗಾರಿ ಸ್ಥಳದಲ್ಲಿ ಸಹಾಯಕ ಜಿಲ್ಲಾ ಸಮನ್ವಯ ಅಧಿಕಾರಿ ಕಿರಣ ಕುಮಾರ, ತಾಲೂಕು ಐ.ಇ.ಸಿ ಸಂಯೋಜಕ ವಿರೇಶ, ತಾಂತ್ರಿಕ ಸಹಾಯಕ ಪ್ರದೀಪ, ನರೇಗಾ ಸಿಬ್ಬಂದಿಗಳು, ಕಾಯಕ ಬಂಧುಗಳು, ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

ಗ್ರಾಮ ಪಂಚಾಯಿತಿಯ ಅಧ್ಯಕ್ಷ ಪ್ರಕಾಶಗೌಡ ಪಾಟೀಲ ಮಾತನಾಡಿ, ಯೋಜನೆಯಡಿ ಪ್ರತಿ ಕೂಲಿಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಿಸಿ ವಾರ್ಷಿಕ 100 ಮಾನವ ದಿನಗಳ ಕೂಲಿ ಕೆಲಸ ನೀಡಲಾಗುತ್ತದೆ. ಗ್ರಾಮದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಎರೆ ಹುಳು ಘಟಕ, ದನದ ಕೊಟ್ಟಿಗೆ ಮುಂತಾದ ಕಾಮಗಾರಿಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here