ನಿತ್ಯ ರಾತ್ರಿ ಎರಡು ಬೆಳ್ಳುಳ್ಳಿ ಎಸಳು ತಿಂದರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

0
Spread the love

ಭಾರತೀಯರು ಖಾದ್ಯಕ್ಕೂ ಮನೆಮದ್ದಿಗೂ ಬಳಕೆ ಮಾಡಿಕೊಂಡಿರುವ ಒಂದು ಸಾಂಬಾರ ಪದಾರ್ಥವೆಂದರೆ ಅದು ಬೆಳ್ಳುಳ್ಳಿ. ಇದು ಸ್ವಲ್ಪ ಘಾಟು ಹೊಂದಿದ್ದರೂ ಹಲವಾರು ಬಗೆಯ ಔಷಧೀಯ ಗುಣಗಳನ್ನು ಹೊಂದಿದೆ ಮತ್ತು ಇದರಿಂದ ಹಲವಾರು ಆರೋಗ್ಯ ಲಾಭಗಳು ಕೂಡ ಇದೆ.

Advertisement

ಇದು ಖಾದ್ಯದಲ್ಲಿ ರುಚಿ ಹೆಚ್ಚಿಸುವುದು ಕೂಡ. ಇದನ್ನು ಒಗ್ಗರಣೆ ಹಾಕಲು, ಚಟ್ನಿ ಮಾಡಲು ಇತರ ಪದಾರ್ಥಗಳಲ್ಲಿ ಕೂಡ ಬಳಕೆ ಮಾಡಲಾಗತ್ತದೆ. ಇದೇ ಬೆಳ್ಳುಳ್ಳಿಯನ್ನು ಹಸಿಯಾಗಿ ನಿತ್ಯವೂ ಸೇವನೆ ಮಾಡಿದರೆ ದೇಹಕ್ಕೆ ಸಾಕಷ್ಟು ಬೆನಿಫಿಟ್ ಸಿಗುತ್ತದೆ.

ಪ್ರತಿದಿನ ರಾತ್ರಿ ಕೇವಲ ಎರಡು ಎಸಳು ಬೆಳ್ಳುಳ್ಳಿ  ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಜೊತೆಗೆ ಕಾಯಿಲೆಗಳು ಹತ್ತಿರವೂ ಸುಳಿಯುವುದಿಲ್ಲ. ಹಾಗಾದರೆ ಇದನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವ ರೀತಿಯ ಲಾಭಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಬೆಳ್ಳುಳ್ಳಿ ಸೇವನೆಯಿಂದ ಸಿಗುವ ಪ್ರಯೋಜನಗಳು?

* ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಉತ್ತಮವಾದ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ವಿಟಮಿನ್ ಬಿ6, ಸಿ, ಮ್ಯಾಂಗನೀಸ್, ಸೆಲೆನಿಯಮ್ ಮತ್ತು ಫೈಬರ್ ಇರುತ್ತದೆ.

* ಪ್ರತಿದಿನ ರಾತ್ರಿ ಎರಡು ಎಸಳು ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ವಿವಿಧ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.

* ಪ್ರತಿದಿನ ತಪ್ಪದೆ ಬೆಳ್ಳುಳ್ಳಿ ಎಸಳನ್ನು ಸೇವನೆ ಮಾಡಿದರೆ ಚರ್ಮಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಮತ್ತು ಕೂದಲು ಉದುರುವಿಕೆಯಂತಹ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.

* ಬೆಳ್ಳುಳ್ಳಿ ಎಸಳುಗಳನ್ನು ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಿ ನಿಮ್ಮ ಆರೋಗ್ಯ ಸುಧಾರಣೆಯಾಗುವಂತೆ ಮಾಡುತ್ತದೆ. ರಕ್ತ ಪರಿಚಲನೆ ಸುಧಾರಿಸುತ್ತದೆ.

* ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಪ್ರತಿದಿನ ಬೆಳಿಗ್ಗೆ ಎರಡು ಬೆಳ್ಳುಳ್ಳಿ ಎಸಳುಗಳನ್ನು ಅಗಿಯುವುದು ಒಳ್ಳೆಯದು. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

* ಬೆಳ್ಳುಳ್ಳಿ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯಲ್ಲಿ ಕಿಣ್ವಗಳ ಉತ್ಪಾದನೆ ಸುಧಾರಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಗ್ಯಾಸ್ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

* ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎರಡು ಎಸಳು ಬೆಳ್ಳುಳ್ಳಿ ತಿನ್ನಬೇಕು. ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚಿನ ಕ್ಯಾಲೊರಿಗಳನ್ನು ಕರಗಿಸಲು ಸಹಾಯ ಮಾಡುತ್ತದೆ. ಹಾಗಾಗಿ ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಇದರಲ್ಲಿರುವ ಸೆಲೆನಿಯಮ್ ನಿದ್ರೆ ಚೆನ್ನಾಗಿ ಬರುವುದಕ್ಕೆ ಸಹಕಾರಿಯಾಗುತ್ತದೆ.

* ಬೆಳ್ಳುಳ್ಳಿ ಎಸಳುಗಳು ಕೊಲೆಸ್ಟ್ರಾಲ್ ಅನ್ನು ಕರಗಿಸಿ ಹೃದಯಕ್ಕೆ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಹೃದಯ ಸಂಬಂಧಿತ ಸಮಸ್ಯೆಗಳನ್ನು ತಡೆಯುತ್ತದೆ.

* ಬೆಳ್ಳುಳ್ಳಿ ಎಸಳುಗಳನ್ನು ತಿನ್ನುವುದರಿಂದ ಯಕೃತ್ತು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಯಕೃತ್ತನ್ನು ಆರೋಗ್ಯಕರವಾಗಿರಿಸುತ್ತದೆ.

* ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ನರಮಂಡಲವನ್ನು ಶಾಂತವಾಗಿರಿಸುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ. ಮಾನಸಿಕ ಆರೋಗ್ಯವು ಸುಧಾರಿಸುತ್ತದೆ.

.


Spread the love

LEAVE A REPLY

Please enter your comment!
Please enter your name here