ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್​ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

0
Spread the love

ಪ್ರತಿ ದಿನ ನಾವು ತಯಾರಿಸುವ ವಿವಿಧ ಅಡುಗೆಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಕೆ ಮಾಡುತ್ತೇವೆ. ಸಹಜವಾಗಿ ಇವುಗಳನ್ನು ಹಸಿಯಾಗಿ ತಿನ್ನುವುದಕ್ಕಿಂತ ಒಗ್ಗರಣೆ ಮಾಡಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಮತ್ತು ತಿನ್ನಲು ಕೂಡ ರುಚಿಯಾಗಿರುತ್ತದೆ. ಬೆಳ್ಳುಳ್ಳಿಯನ್ನು ಸಾಮಾನ್ಯವಾಗಿ ಹಸಿಯಾಗಿ ತಿನ್ನಲು ಯಾರೂ ಕೂಡ ಇಷ್ಟಪಡುವುದಿಲ್ಲ. ಏಕೆಂದರೆ ಇದರ ಗಾಢವಾದ ವಾಸನೆ ಯಾರಿಗೂ ಇಷ್ಟವಾಗುವುದಿಲ್ಲ. ಅದೂ ಅಲ್ಲದೆ ಬೆಳ್ಳುಳ್ಳಿಯನ್ನು ಹೆಚ್ಚಾಗಿ ತಿನ್ನಬಾರದು ಎಂದು ಹೇಳುತ್ತಾರೆ. ಇದು ಹೊಟ್ಟೆಯಲ್ಲಿ ಅಲ್ಸರ್ ಸೇರಿದಂತೆ ಇನ್ನು ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.

Advertisement

ಕೆಲ ಮಂದಿಯಂತೂ ಆರೋಗ್ಯಕರ ಜೀವನಶೈಲಿಯ ಜೊತೆಗೆ ಜೀವಿತಾವಧಿ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹಲವು ಹವ್ಯಾಸಗಳನ್ನು ರೂಢಿಸಿಕೊಳ್ಳುವುದರ ಜೊತೆಗೆ ತಮ್ಮ ಆಹಾರದಲ್ಲಿ ಅನೇಕ ಬದಲಾವಣೆಗಳನ್ನು ಮಾಡಿಕೊಳ್ಳುತ್ತಾರೆ. ವಿಶೇಷವೆಂದರೆ ಮತ್ತಷ್ಟು ಜನರು ತಮ್ಮ ಆಹಾರದಲ್ಲಿ ಹೆಚ್ಚು ಬೆಳ್ಳುಳ್ಳಿ ತಿನ್ನುವ ಅಭ್ಯಾಸವನ್ನು ಮಾಡಿಕೊಂಡಿದ್ದಾರೆ.

ಆದರೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂದು ತಿಳಿದರೆ ನಿಮಗೆ ಶಾಕ್ ಆಗಬಹುದು. ಅಗತ್ಯವಾದ ಪೋಷಕಾಂಶಗಳನ್ನು ಒಳಗೊಂಡಿರುವ ಬೆಳ್ಳುಳ್ಳಿ, ನಮಗೆ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ವಾಸ್ತವವಾಗಿ ಬೆಳ್ಳುಳ್ಳಿ ನಮ್ಮ ದೇಹಕ್ಕೆ ನೈಸರ್ಗಿಕ ಪ್ರತಿಜೀವಕವಾಗಿ ಕಾರ್ಯನಿರ್ವಹಿಸುತ್ತದೆ.

ಬೆಳ್ಳುಳ್ಳಿಯಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಸತು, ಸೆಲೆನಿಯಮ್ ಮತ್ತು ವಿಟಮಿನ್ ಸಿ, ಎ ಮತ್ತು ಬಿ ಸಮೃದ್ಧವಾಗಿದೆ. ಹಾಗಾದ್ರೆ ಬೆಳಗ್ಗೆ ಎದ್ದಾಗ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿಂದರೆ ಏನಾಗುತ್ತೆ? ದಿನಕ್ಕೆ ಎಷ್ಟು ಬೆಳ್ಳುಳ್ಳಿ ಎಸಳುಗಳನ್ನು ತಿನ್ನಬಹುದು ಎಂದು ನೋಡೋಣ ಬನ್ನಿ.

ಮಲಬದ್ಧತೆಯನ್ನು ನಿವಾರಿಸುತ್ತದೆ: ಅತಿಸಾರ ಮತ್ತು ಮಲಬದ್ಧತೆಯಂತಹ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಗಟ್ಟುವಲ್ಲಿ ಬೆಳ್ಳುಳ್ಳಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಒಲೆಯ ಮೇಲೆ ನೀರನ್ನು ಇಟ್ಟು, ಅದಕ್ಕೆ ಬೆಳ್ಳುಳ್ಳಿ ಎಸಳು ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಈ ನೀರನ್ನು ಸೋಸಿ ಖಾಲಿ ಹೊಟ್ಟೆಯಲ್ಲಿ ಕುಡಿದರೆ, ಇದು ಅತಿಸಾರ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ.

ಇದಲ್ಲದೇ ಬೆಳ್ಳುಳ್ಳಿ ಹೃದಯ ಸಂಬಂಧಿ ಸಮಸ್ಯೆಗಳನ್ನೂ ನಿವಾರಿಸುತ್ತದೆ. ಬೆಳ್ಳುಳ್ಳಿ ತಿನ್ನುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಜಗಿಯುವುದು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಹಸಿವನ್ನು ಉತ್ತೇಜಿಸುತ್ತದೆ.

ಡಿಟಾಕ್ಸಿಫೈಯರ್ ಆಗಿ ಕಾರ್ಯನಿರ್ವಹಿಸುತ್ತದೆ: ಬೆಳ್ಳುಳ್ಳಿ ನೈಸರ್ಗಿಕ ನಿರ್ವಿಶೀಕರಣವಾಗಿದೆ. ಇದು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದರಲ್ಲಿರುವ ಅಲಿಸಿನ್ ಎಂಬ ಸಂಯುಕ್ತವು ಯಕೃತ್ತಿನ ಕಾರ್ಯವನ್ನು ಸುಧಾರಿಸುತ್ತದೆ. ಆದ್ದರಿಂದ ಇದು ರಕ್ತದ ಹರಿವಿನಿಂದ ಹಾನಿಕಾರಕ ವಸ್ತುಗಳನ್ನು ಪರಿಣಾಮಕಾರಿಯಾಗಿ ತೆಗೆದುಹಾಕುತ್ತದೆ. ನಿಯಮಿತ ನಿರ್ವಿಶೀಕರಣವು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಚರ್ಮವನ್ನು ಶುದ್ಧೀಕರಿಸುತ್ತದೆ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬೆಳ್ಳುಳ್ಳಿ ಅತ್ಯುತ್ತಮ ಆಯ್ಕೆಯಾಗಿದೆ. ಅಲಿಸಿನ್ ಎಂಬ ಸಲ್ಫರ್ ಸಂಯುಕ್ತವು ಬಿಳಿ ರಕ್ತ ಕಣಗಳ ಚಟುವಟಿಕೆಯನ್ನು ಹೆಚ್ಚಿಸುತ್ತದೆ. ಸೋಂಕುಗಳು ಮತ್ತು ಹಾನಿಕಾರಕ ಸೂಕ್ಷ್ಮಜೀವಿಗಳಿಂದ ನಮ್ಮ ದೇಹವನ್ನು ರಕ್ಷಿಸಲು ಇವುಗಳು ಮುಖ್ಯವಾಗಿವೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಸ್ವಾಭಾವಿಕವಾಗಿ ಬಲಗೊಳ್ಳುತ್ತದೆ.

ಬೆಳ್ಳುಳ್ಳಿ ತಿನ್ನಲು ಸರಿಯಾದ ಮಾರ್ಗ: ಬೆಳಗ್ಗೆ ಎದ್ದ ನಂತರ 2-3 ಬೆಳ್ಳುಳ್ಳಿ ಎಸಳುಗಳನ್ನು ತಿನ್ನಿ. ನಿಮಗಿಷ್ಟವಿದ್ದರೆ, ಬೆಳ್ಳುಳ್ಳಿಯನ್ನು ಹುರಿದು ಸಹ ತಿನ್ನಬಹುದು. ಇಲ್ಲದಿದ್ದರೆ ನೀವು ಮಲಗುವ ಮುನ್ನ ಬೆಳ್ಳುಳ್ಳಿ ಎಸಳನ್ನು ನೀರಿನಲ್ಲಿ ನೆನೆಸಿ, ಈ ನೀರನ್ನು ಬೆಳಗ್ಗೆ ಕುಡಿದು, ಬೆಳ್ಳುಳ್ಳಿಯನ್ನು ಸೇವಿಸಬಹುದು.


Spread the love

LEAVE A REPLY

Please enter your comment!
Please enter your name here