ಬಳ್ಳಾರಿ :-ಜೈಲಲ್ಲಿ ಐಶಾರಾಮಿ ಜೀವನ ನಡೆಸುತ್ತಿರುವ ದರ್ಶನ್ ಮತ್ತು ಅವರ ಗ್ಯಾಂಗ್ ಸದಸ್ಯರನ್ನು ಬಳ್ಳಾರಿ ಸೇರಿ ವಿವಿಧ ಜೈಲುಗಳಿಗೆ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ.
ಇಂದು ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದ ಬಳಿಕ ದರ್ಶನ್&ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಂದ ಎತ್ತಂಗಡಿ ಆಗಲಿದೆ.
ಪವಿತ್ರಾಗೌಡ ವಿರುದ್ಧ ಯಾವುದೇ ಆರೋಪ ಕೇಳಿಬರದ ಹಿನ್ನೆಲೆಯಲ್ಲಿ ಆಕೆಯನ್ನು ಬೆಂಗಳೂರು ಜೈಲಲ್ಲೇ ಇರಿಸಲಾಗುತ್ತದೆ. ದರ್ಶನ್ ಗ್ಯಾಂಗ್ ಬೇರೆ ಜೈಲಿಗೆ ಎತ್ತಂಗಡಿ ಆಗುವವರೆಗೆ ಬೆಂಗಳೂರು ಜೈಲಲ್ಲೇ ವಿಚಾರಣೆಗೆ ಒಳಪಡಿಸಲು ಪೊಲೀಸರು ಕೋರ್ಟ್ ಅನುಮತಿ ಪಡೆದುಕೊಂಡಿದ್ದಾರೆ.
ಜೈಲಿಗೆ ತೆರಳಿ ದರ್ಶನ್‌ಗೆ ಡ್ರಿಲ್ ಮಾಡಲು ಪೊಲೀಸರಿಗೆ ಕೋರ್ಟ್ ಅನುಮತಿ ನೀಡಿದೆ. ಪೊಲೀಸರು ತನಿಖೆ ಜೊತೆಗೆ ಸ್ಥಳ ಮಹಜರು ನಡೆಸಲಿದ್ದಾರೆ. ಒಂದೊಮ್ಮೆ ತನಿಖೆಗೆ ಸಹಕರಿಸದಿದ್ದರೆ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಶಿಫ್ಟ್ ಆಗುತ್ತಿರುವ ಬಳ್ಳಾರಿ ಜೈಲು ಹದಿನಾರು ಎಕರೆಯಲ್ಲಿದೆ. ಅಲ್ಲದೇ ಬಿಗಿ ಭದ್ರತೆಯನ್ನೂ ಹೊಂದಿದೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿರುವ ಬಗ್ಗೆ ಅಲ್ಲಿನ ಜೈಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
ಅಧಿಕಾರಿಗಳು ಬಳ್ಳಾರಿ ಕಾರಾಗೃಹದ ವಿಶೇಷ ಭದ್ರತಾ ವಿಭಾಗದ ಸೆಲ್‌ನಲ್ಲಿ ದರ್ಶನ್‌ನ್ನು ಇರಿಸಲಿದ್ದಾರೆ. ದರ್ಶನ್‌ನನ್ನು ವಿಶೇಷ ಭದ್ರತಾ ವಿಭಾಗದ ಹದಿನೈದನೇ ಸೆಲ್‌ನಲ್ಲಿ ಇರಿಸಲಿದ್ದಾರೆ.
ಈ ಜೈಲ್‌ನಲ್ಲಿ ಒಟ್ಟು ಹದಿನೈದು ಸೆಲ್‌ಗಳಿದ್ದು, ಜೈಲಾಧಿಕಾರಿಗಳು ದರ್ಶನ್‌ಗೆ ಕೊನೆಯ ಭಾಗದ ಸೆಲ್ ನೀಡಲಿದ್ದಾರೆ.
ದರ್ಶನ್ ಭದ್ರತೆಗೆ ಈಗಾಗಲೇ ಮೂವರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಡಿವೋರ್ನ್ ಕ್ಯಾಮೆರಾ ಹಾಗೂ ಸಿಸಿಟಿವಿಯಲ್ಲಿ ಕಣ್ಗಾವಲಿರುವ ಸೆಲ್‌ನಲ್ಲಿ ದರ್ಶನ್ ಇರಲಿದ್ದಾರೆ. ಭದ್ರತೆಗೆ ನಿಯೋಜನೆಯಾಗುವ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮೆರಾ ಕಡ್ಡಾಯವಾಗಿರಲಿದೆ. ಬಳ್ಳಾರಿ ಜೈಲಿನಲ್ಲಿ ಸೂಪರ್ಡೆಂಟ್ ಸೇರಿ ಒಟ್ಟು ನೂರು ಮಂದಿ ಸಿಬ್ಬಂದಿ, ಅಧಿಕಾರಿಗಳಿದ್ದಾರೆ.
ಒಟ್ಟು 385 ಕೈದಿಗಳಿದ್ದು, ಹರ್ಷ ಮರ್ಡರ್ ಕೇಸ್ ಮತ್ತು ಪ್ರವೀಣ್ ಪೂಜಾರಿ ಮರ್ಡರ್ ಕೇಸ್ ಆರೋಪಿಗಳು ಬಳ್ಳಾರಿ ಜೈಲಲ್ಲಿದ್ದಾರೆ. ನಗರದ ಹೃದಯ ಭಾಗದಲ್ಲಿರುವ ಬಳ್ಳಾರಿ ಕೇಂದ್ರ ಕಾರಾಗೃಹ 800-1000 ಕೈದಿಗಳ ಸಾಮರ್ಥ್ಯ ಹೊಂದಿದೆ.
ಸದ್ಯ ವಿಚಾರಣಾಧೀನ, ಸಜಾ ಸಂಬಂಧಿಗಳು ಸೇರಿ ಒಟ್ಟು 385 ಕೈದಿಗಳಿದ್ದಾರೆ. ವಿಚಾರಣಾಧೀನ ಕೈದಿಗಳಿಗೆ 5 ಬ್ಲಾಕ್‌ಗಳಿವೆ. ಸಜಾಸಂಬಂಧಿಗಳಿಗೆ 200 ಪ್ರತ್ಯೇಕ ಸೆಲ್‌ಗಳಿವೆ. ಗಣ್ಯವ್ಯಕ್ತಿಗಳನ್ನು ಇರಿಸಲು ‘ಹೈ ಸೆಕ್ಯೂರಿಟಿ’ ಸೌಲಭ್ಯವುಳ್ಳ ಸೆಲ್‌ಗಳು ಕೂಡ ಇವೆ. ಈ ಸೆಲ್‌ಗಳು ನೀರು, ಶೌಚಾಲಯ ಸೌಲಭ್ಯ ಹೊಂದಿದೆ.