HomeLife Styleಖಾಲಿ ಹೊಟ್ಟೆಯಲ್ಲಿ ಬಿಲ್ವಪತ್ರೆಯನ್ನು ಸೇವಿಸುವ ಪ್ರಯೋಜನಗಳೇನು ಗೊತ್ತಾ..?

ಖಾಲಿ ಹೊಟ್ಟೆಯಲ್ಲಿ ಬಿಲ್ವಪತ್ರೆಯನ್ನು ಸೇವಿಸುವ ಪ್ರಯೋಜನಗಳೇನು ಗೊತ್ತಾ..?

For Dai;y Updates Join Our whatsapp Group

Spread the love

ಬಿಲ್ವಪತ್ರೆ ಶಿವನಿಗೆ ಬಹಳ ಇಷ್ಟ. ಅದಕ್ಕಾಗಿಯೇ ಶಿವಪೂಜೆಯಲ್ಲಿ ಹೂವಿರಲಿ ಇಲ್ಲದಿರಲಿ ಆದರೆ ಬಿಲ್ವಪತ್ರೆ ಇರಲೇಬೇಕು. ಬಿಲ್ವಪತ್ರೆಗಳೊಂದಿಗೆ ಪೂಜಿಸಿದರೆ, ಶಿವನು ಶೀಘ್ರವಾಗಿ ಆಶೀರ್ವದಿಸುತ್ತಾನೆ ಮತ್ತು ಅವರ ಇಷ್ಟಾರ್ಥಗಳನ್ನು ತ್ವರಿತವಾಗಿ ಪೂರೈಸುತ್ತಾನೆ ಎಂದು ಭಕ್ತರು ನಂಬುತ್ತಾರೆ. ಇಂತಹ ಬದಲಾವಣೆ ಮಾನವನ ಆರೋಗ್ಯಕ್ಕೆ ರಾಮಬಾಣವಿದ್ದಂತೆ. ಹಾಗಾದರೆ ಬಿಲ್ವಪತ್ರೆ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ಇಲ್ಲಿದೆ ಮಾಹಿತಿ

  • ಬಿಲ್ವಪತ್ರೆಯಲ್ಲಿ ಉತ್ತಮ ಪ್ರಮಾಣದ ಫೈಬರ್ ಕಂಡುಬರುವುದರಿಂದ ಇದು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ. ನಿಮಗೆ ಜೀರ್ಣಕಾರಿ ಸಮಸ್ಯೆ ಇದ್ದರೆ ನೀವು ಇದನ್ನು ಪ್ರತಿನಿತ್ಯ ಸೇವನೆ ಮಾಡಬಹುದು.
  • ಹೃದ್ರೋಗದ ಸಮಸ್ಯೆ ಇರುವವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಬಿಲ್ವಪತ್ರೆಯಲ್ಲಿ ಉತ್ಕರ್ಷಣ ನಿರೋಧಕ ಗುಣಗಳಿವೆ, ಇದು ಹೃದಯವನ್ನು ರೋಗಗಳಿಂದ ರಕ್ಷಿಸುತ್ತದೆ ಮತ್ತು ಹೃದಯವನ್ನು ಬಲಪಡಿಸಲು ಸಹಾಯ ಮಾಡುತ್ತದೆ.
  • ಮಧುಮೇಹ ರೋಗಿಗಳಿಗೂ ಈ ಬಿಲ್ವಪತ್ರೆ ವರದಾನವಿದ್ದಂತೆ. ಈ ಎಲೆಯನ್ನು ತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದರಲ್ಲಿರುವ ಫೈಬರ್ ಮತ್ತು ಇತರ ಪೋಷಕಾಂಶಗಳು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.
  • ಇನ್ನು ಈ ಎಲೆಯಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಎರಡು ಅಥವಾ ಮೂರು ಎಲೆಗಳನ್ನು ಚೆನ್ನಾಗಿ ಜಗಿದು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕೆಮ್ಮು ಮತ್ತು ಶೀತದಂತಹ ಸಮಸ್ಯೆಗಳು ದೂರವಿರುತ್ತದೆ.
  • ಪೈಲ್ಸ್ ಸಮಸ್ಯೆ ಇರುವವರು, ಖಾಲಿ ಹೊಟ್ಟೆಯಲ್ಲಿ ಬಿಲ್ವಪತ್ರೆ ತಿನ್ನುವುದು ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಈ ಎಲೆ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತವೆ ಹಾಗಾಗಿ ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
  • ಈ ಎಲೆ ತುಂಬಾ ತಂಪಾಗಿದ್ದು ಇದರ ಸೇವನೆ ಮಾಡುವುದರಿಂದ ದೇಹವೂ ತಂಪಾಗಿರುತ್ತದೆ. ಹೀಟ್ ಸ್ಟ್ರೋಕ್ ನಿಂದ ರಕ್ಷಿಸಿಕೊಳ್ಳಲು ಇದರ ಸೇವನೆ ಮಾಡಬಹುದು. ಅದರ ಜೊತೆಗೆ ಬಾಯಿಯಲ್ಲಿ ಗುಳ್ಳೆಗಳು ಎದ್ದಾಗಲೂ ಇದರ ಸೇವನೆ ಮಾಡಬಹುದು. ಹಾಗಾಗಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆಗಳನ್ನು ಜಗಿದು ತಿನ್ನುವುದರಿಂದ ಅನೇಕ ರೀತಿಯ ಪ್ರಯೋಜನವನ್ನು ಪಡೆಯಬಹುದು.
  • ಈ ಎಲೆಗಳಲ್ಲಿ ಕಡಿಮೆ ಕ್ಯಾಲೊರಿಗಳು ಮತ್ತು ಹೆಚ್ಚಿನ ಫೈಬರ್ ಇದೆ, ಹಾಗಾಗಿ ಇದು ಹೆಚ್ಚುತ್ತಿರುವ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ .

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!