ಗದಗ: ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಹೇಯ ಕೃತ್ಯದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
Advertisement
ಗದಗನಲ್ಲಿ ಖಾಸಗಿ ಆಸ್ಪತ್ರೆಯ ಓಪಿಡಿ ಬಂದ್ ಮಾಡಿ ಐಎಂಎ ಪ್ರಸೂತಿ ಸ್ತ್ರೀ ರೋಗ ತಜ್ಞ ಸಂಘದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಗದಗ ನಗರದ ಮಹಾತ್ಮಾ ಗಾಂಧಿ ಸರ್ಕಲ್‌ನಿಂದ ಪ್ರತಿಭಟನೆ ನಡೆಸಿ ಗದಗ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಲಿದ್ದಾರೆ.
ಇಂದು ಮುಂಜಾನೆ 6 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಖಾಸಗಿ ಓಪಿಡಿ ಬಂದ್ ಮಾಡುವ ಮೂಲಕ ಸ್ವಾತಂತ್ರ್ಯ ಸಿಕ್ಕು 78 ವರ್ಷವಾದ್ರು ಮಹಿಳೆಯರಿಗೆ ಸುರಕ್ಷಿತ ಇಲ್ಲಾ ಎಂದು ಕಿಡಿಕಾರಿದ್ದಾರೆ.
ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ನೂರಾರು ಸಂಖ್ಯೆಯಲ್ಲಿ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳು ಭಾಗಿಯಾಗಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.