ತುಮಕೂರು: ಬಾಣಂತಿ ಸಾವಿಗೆ ವೈದ್ಯರೇ ಕಾರಣ: ಶವವಿಟ್ಟು ಸಂಬಂಧಿಕರ ಪ್ರತಿಭಟನೆ!

0
Spread the love

ತುಮಕೂರು:- ತುಮಕೂರಿನಲ್ಲಿ ಬಾಣಂತಿ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.

Advertisement

ಇಲ್ಲಿನ ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ 2 ತಿಂಗಳ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು.

28 ವರ್ಷದ ಸಿಂಧು ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆಯಲು ಬುಧವಾರ ಮಧ್ಯಾಹ್ನ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ರಾತ್ರಿವರೆಗೂ ಚಿಕಿತ್ಸೆ ನೀಡಿದ ವೈದ್ಯರು ನಂತರ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಾರೆ. ಆದರೆ ಆಸ್ಪತ್ರೆಯಿಂದ ಸ್ವಲ್ಪ ದೂರ ಹೋಗುವಷ್ಟರಲ್ಲಿ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮುಂದೆ ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದರು. ಬಾಣಂತಿಯನ್ನು ಐಸಿಯುನಲ್ಲಿ ಇಟ್ಟು ಸಾವಿಗೆ ಕಾರಣರಾಗಿದ್ದಾರೆ ಎಂದು ಮೃತರ ತಂದೆ, ತಾಯಿ ಆರೋಪಿಸಿದರು.


Spread the love

LEAVE A REPLY

Please enter your comment!
Please enter your name here