ವೈದ್ಯರ ನಿರ್ಲಕ್ಷ್ಯ: 7 ವರ್ಷದ ಬಾಲಕ ದುರ್ಮರಣ!

0
Spread the love

ಚಿಕ್ಕಮಗಳೂರು:- ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ಬಾಲಕ ಮೃತಪಟ್ಟಿರುವ ಘಟನೆ ಜರುಗಿದೆ.

Advertisement

ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಸೋನೇಶ್ ನನ್ನ ಪೋಷಕರು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು.

ವೈದ್ಯ ವರುಣ್, ಬಾಲಕ ಸೋನೇಶ್ ಅವರ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.

ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃತಪಟ್ಟಿದ್ದಾರೆ.

ಶವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹ ರವಾನೆ ಮಾಡಲಾಗಿದೆ. ಇನ್ನೂ ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here