ವೈದ್ಯರ ನಿರ್ಲಕ್ಷ್ಯ: ತಾಯಿ ಹೊಟ್ಟೆಯಲ್ಲೇ ನವಜಾತ ಗಂಡು ಶಿಶು ಸಾವು!

0
Spread the love

ಯಾದಗಿರಿ:- ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಹೊಟ್ಟೆಯಲ್ಲೇ ಗಂಡು ಮಗು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.

Advertisement

ಹೆರಿಗೆ ನೋವಿನಿಂದ ಮಹಿಳೆ ನರಳುತ್ತಿದ್ದರೂ ಆಸ್ಪತ್ರೆಯಲ್ಲಿ ಬೆಡ್ ಕೊಡದೆ, ಚಿಕಿತ್ಸೆ ನೀಡಿಲ್ಲ ಎಂದು ದೂರಲಾಗಿದೆ. ಮಗುವಿನ ಮೃತದೇಹದ ಜೊತೆ ಆಸ್ಪತ್ರೆ ಮುಂದೆ ಕುಳಿತು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ನೀಲಬಾಯಿ ಎಂಬ ಮಹಿಳೆಗೆ ನಿನ್ನೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಅವರನ್ನು ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕುಟುಂಬಸ್ಥರು ಕರೆತಂದಿದ್ದರು. ಆದರೆ ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರು ಸರಿಯಾಗಿ ಸ್ಪಂದಿಸಿಲ್ಲ. ಅವರಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ್ದಲ್ಲದೆ ಕನಿಷ್ಠ ಬೆಡ್​​ ಕೂಡ ನೀಡಿಲ್ಲ. ಇವತ್ತು ಬೆಳಿಗ್ಗೆ ಅವರಿಗೆ ರಕ್ತಸ್ರಾವ ಶುರುವಾದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಮಗುವನ್ನು ಹೊರತೆಗೆದಿದ್ದಾರೆ. ಆದರೆ ದುರಾದ್ರಷ್ಟವಶಾತ್​​ ಮಗು ಹೊಟ್ಟೆಯಲ್ಲೇ ಸಾವನ್ನಪ್ಪಿದೆ.

ಸಮಯಕ್ಕೆ ಸರಿಯಾಗಿ ನೀಲಬಾಯಿ ಅವರಿಗೆ ಹೆರಿಗೆ ಮಾಡಿಸಿದ್ದರೆ ಮಗು ಬದುಕುತ್ತಿತ್ತು ಎಂದು ಕುಟುಂಬಸ್ಥರು ಕಿಡಿ ಕಾರಿದ್ದು, ನಿರ್ಲಕ್ಷ್ಯ ವಹಿಸಿದ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮೃತ ನವಜಾತ ಶಿಶುವಿನ ಶವದ ಜೊತೆ ಆಸ್ಪತ್ರೆ ಮುಂದೆ ಕಣ್ಣೀರು ಹಾಕುತ್ತಾ ಪ್ರತಿಭಟನೆ ನಡೆಸಿದ್ದಾರೆ. ನೀಲಬಾಯಿ ದೇವಪ್ಪ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, 9 ವರ್ಷಗಳ ಬಳಿಕ ಈಗ ಗಂಡು ಮಗು ಆಗಿತ್ತು. ಆದರೆ, ಮಗು ತಾಯಿಯ ಹೊಟ್ಟೆಯಲ್ಲೇ ಮೃತಪಟ್ಟಿರೋದು ಕುಟುಂಬಸ್ಥರ ದುಃಖ ಹೆಚ್ಚು ಮಾಡಿದೆ.


Spread the love

LEAVE A REPLY

Please enter your comment!
Please enter your name here