ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ರಿಯಾನ್ (19), ಶಿವಕುಮಾರ (25), ಅಪ್ಪು (20) ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಆಂಧ್ರದಲ್ಲಿ ಕಳ್ಳತನದ ವೇಳೆ ಓರ್ವ ಮಹಿಳೆಯನ್ನು ಕೊಲೆ ಮಾಡಿದ್ದರು. ಪೊಲೀಸರ ಕಣ್ತತಪ್ಪಿಸಿ ಆಂಧ್ರಕ್ಕೆ ತೆರಳುವಾಗ ಆರೋಪಿಗಳು ತಾಲೂಕಿನ ಗುಂಜೂರು ಗ್ರಾಮದ ಬಳಿ ಮೂರು ಕಡೆ ಸರಗಳ್ಳತನ ಮಾಡಿದ್ದರು.
Advertisement
ಮೈಸೂರಿನಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿದ್ದರು. ಸರಗಳ್ಳತನ ಪ್ರಕರಣ ಬೆನ್ನತ್ತಿದ್ದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪಿಐ ಸಾದಿಕ್ ಪಾಷಾ ಆ್ಯಂಡ್ ಟೀಮ್ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಳವು ಮಾಲು ಜಪ್ತಿಯಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.