ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಕೊನ್ನಘಟ್ಟ ಗ್ರಾಮದಲ್ಲಿ ನಡೆದಿದೆ. ನಾಗಚೈತನ್ಯ (8) ಮೃತ ಬಾಲಕನಾಗಿದ್ದು, ಅಣ್ಣ ತಂಗಿ ಜೊತೆಯಲ್ಲಿ ಕೃಷಿ ಹೊಂಡದ ಕಡೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ.
ಆಯತಪ್ಪಿ ಅಣ್ಣ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಕೂಡಲೇ ಪೋಷಕರಿಗೆ ತಂಗಿ ವಿಚಾರ ತಿಳಿಸಿದ್ದಾಳೆ. ಪೋಷಕರು ಹೋಗಿ ನೋಡುವ ವೇಳೆಗೆ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



