ಲಿಡ್ಕರ್‌’ಗೆ ಡಾಲಿ ಧನಂಜಯ ರಾಯಭಾರಿ: ಅಧಿಕೃತ ಘೋಷಣೆ ಮಾಡಿದ ಸಿಎಂ

0
Spread the love

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ದ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ಅವರನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ನಟ ಧನಂಜಯ ಅವರನ್ನು ಲಿಡ್ಕರ್ ರಾಯಭಾರಿ ಘೋಷಿಸಿದರು. ಇದೇ ಮೊದಲ ಬಾರಿಗೆ ಲಿಡ್ಕರ್ ಗೆ ರಾಯಭಾರಿಯನ್ನು ಆಯ್ಕೆ ಮಾಡಿದ್ದು ವಿಶೇಷ.

Advertisement

ಸ್ಯಾಂಡಲ್‌ವುಡ್ ನಲ್ಲಿ ನಟನಾಗಿ ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಚರ್ಮ ಕುಶಲಕರ್ಮಿಗಳ ಕುಟುಂಬದ ನೆರವಿಗೆನಿಂತಿದ್ದಾರೆ.

ವಿಶೇಷ ಎಂದರೆ ಲಿಡ್ಕರ್ ರಾಯಭಾರಿಯಾಗಲು ಧನಂಜಯ ಅವರು ಒಂದು ರೂಪಾಯಿ ಸಂಭಾವನೆಯನ್ನು ಕೂಡ ಪಡೆದಿಲ್ಲ. ಉಚಿತವಾಗಿ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುವ ಮೂಲಕ ಧನಂಜಯ್ ಮಾದರಿಯಾಗಿದ್ದಾರೆ. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 67ನೇ ಪುಣ್ಯ ಸ್ಮರಣೆ ದಿನವೇ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ವಿಶೇಷವಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಧನಂಜಯ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಪ್ರಾರಂಭಿಸಿದರು.

ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ ರಾಯಭಾರಿಯನ್ನ ಆಯ್ಕೆ ಮಾಡಿ ಈ ನಿಗಮವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರಕ್ಕೆ ಡಾಲಿ ರಾಯಾಭಾರಿಯಾಗುವ ಮೂಲಕ ಬಡವರ ಮಕ್ಕಳು ಬೆಳಿಬೇಕು ಎನ್ನುವುದನ್ನು ಮತ್ತೆ ಸಾರಿ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here