ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಭರ್ಜರಿ ಗೆಲುವು: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

0
Spread the love

ನವದೆಹಲಿ: 2024ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮತ ಎಣಿಕೆ ಕಾರ್ಯ ಬಹುತೇಕ ಮುಗಿದಿದ್ದು, ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್ ಅವರು ಬರೋಬ್ಬರಿ 270ಕ್ಕೂ ಮತಗಳು ಪಡೆಯುವ ಮೂಲಕ ಗೆದ್ದು ಬೀಗಿದ್ದಾರೆ. ಈ ಮೂಲಕ ಅಮೆರಿಕಾದ 47ನೇ ಅಧ್ಯಕ್ಷರಾಗಿ ಟ್ರಂಪ್​​​ ಆಯ್ಕೆಯಾಗಿದ್ದಾರೆ.

Advertisement

https://x.com/narendramodi/status/1854075308472926675

ಇನ್ನೂ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಎಕ್ಸ್​ನಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿದ್ದು, ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು.

ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ. ಡೊನಾಲ್ಡ್​ ಟ್ರಂಪ್​​ 2ನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ ಮುಂದಿನ 4 ವರ್ಷಗಳ ಕಾಲ ಅಮೆರಿಕಾ ಅಧ್ಯಕ್ಷರಾಗಲಿದ್ದಾರೆ. ಅಮೆರಿಕಾದ ಪ್ರತಿಷ್ಠಿತ ಶ್ವೇತಭವನದಲ್ಲಿ ಕೂತು ರೂಲ್​ ಮಾಡಲಿದ್ದಾರೆ.


Spread the love

LEAVE A REPLY

Please enter your comment!
Please enter your name here