ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕರ್ನಾಟಕ ಸರ್ಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪನಿಯ ಅಧ್ಯಕ್ಷರಾದ ಸತೀಶ್ ಕೃಷ್ಣ ಸೈಲ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಂಸ್ಥೆಯ ಆರ್ಥಿಕ ವರ್ಷ 2023-24ರ ಲಾಭಾಂಶದಿಂದ 1 ಕೋಟಿ ರೂಪಾಯಿ ದೇಣಿಗೆಯ ಚೆಕ್‌ನ್ನು ಗುರುವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರಿಸಿದರು.
ಸಂಸ್ಥೆಯು ಸಾಮಾಜಿಕ ಕಳಕಳಿ ಹೊಂದಿರುವ ದ್ಯೋತಕ ಇದಾಗಿದ್ದು,
ಕೆಎಸ್‌ಎಂಸಿಎ ಸಂಸ್ಥೆಯು ಆರ್ಥಿಕ ವರ್ಷ 2023-24ರ ಸಾಲಿನಲ್ಲಿ ರೂ.5.29 ಕೋಟಿಗಳ ಮೊತ್ತದ ಲಾಭಾಂಶವನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೆಎಸ್‌ಎಂಸಿಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಅತೀಕುಲ್ಲಾ ಶರೀಫ್ ಮತ್ತು ಉಪ ಪ್ರಧಾನ ವ್ಯವಸ್ಥಾಪಕರಾದ ಪಿ.ಎಸ್. ನಂದೀಶ ಉಪಸ್ಥಿತರಿದ್ದರು.