ವಿಜಯಪುರ: ಲಪುಟ್ ನನ್ ಮಕ್ಕಳ ಯಾವುದೇ ಪ್ರತಿಕ್ರಿಯೆ ಕೇಳಬೇಡಿ ಎಂದು ಮಾಜಿ ಶಾಸಕ ರೇಣುಕಾಚಾರ್ಯ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಲಪುಟ್ ನನ್ ಮಕ್ಕಳ ಯಾವುದೇ ಪ್ರತಿಕ್ರಿಯೆ ಕೇಳಬೇಡಿ. ಒಳ್ಳೆಯ ರಾಜಕಾರಣದ ಬಗ್ಗೆ ಮಾನ ಮರ್ಯಾದೆ ಇರುವವರ ಬಳಿ ಪ್ರಶ್ನೆ ಕೇಳಿ ಎಂದು ಕಿಡಿಕಾರಿದ್ದಾರೆ.
Advertisement
ಮಾಜಿ ಸಿಎಂ ಯಡಿಯೂರಪ್ಪ ಮೇಲೆ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಲು ಸಚಿವ ಸಂಪುಟದಲ್ಲಿ ಈಗ ಒಪ್ಪಿಗೆ ನೀಡಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಮಾಡಿದ್ದು ಏನು? ಒಂದೂವರೆ ವರ್ಷದ ಆಡಳಿತದ ಬಳಿಕ ಸಿದ್ದರಾಮಯ್ಯ ಈಗ ಏಕೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.