ನನ್ನ ಮನಸ್ಸಿಗೆ ನೋವಾಗೊ ರೀತಿ ಮಾಡ್ಬೇಡಿ: ಫ್ಯಾನ್ಸ್ ಗೆ ಯಶ್ ಹೇಳಿದ್ದೇನು?

0
Spread the love

ನನ್ನ ಮನಸ್ಸಿಗೆ ನೋವಾಗೊ ರೀತಿ ಮಾಡ್ಬೇಡಿ ಎಂದು ತಮ್ಮ ಅಭಿಮಾನಿಗಳಿಗೆ ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅವರು ವಿಶೇಷ ರೀತಿ ಮನವಿ ಮಾಡಿದ್ದಾರೆ.

Advertisement

ಎಸ್, ಜನವರಿ 8 ರಂದು ರಾಕಿಂಗ್ ಸ್ಟಾರ್ ಯಶ್ ಅವರಿಗೆ ಹುಟ್ಟುಹಬ್ಬ ಸಂಭ್ರಮ. ಆದರೆ ಯಶ್ ಅವರು, ಹುಟ್ಟುಹಬ್ಬವನ್ನು ಆಚರಿಸಿಕೊಳ್ಳೋದಿಲ್ಲ ಅಂತ ಫ್ಯಾನ್ಸ್‌ಗೆ ಶಾಕ್ ಕೊಟ್ಟಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಯಶ್, ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ.

ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು (ಜ.8) ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ, ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ ಎಂದಿದ್ದಾರೆ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ. ನಿಮ್ಮ ಪ್ರೀತಿಯ ಯಶ್ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here