• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home culture

ಅನ್ನ ಕೊಡುವ ರೈತನನ್ನು ಮರೆಯಬಾರದು

News Desk by News Desk
March 23, 2024
in culture, social avareness
rambhapuri
0
SHARES
1
VIEWS
Share on Facebook
ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು : ಶ್ರಮದ ಬೆವರಿನ ಫಲ ಶಾಶ್ವತ ಮತ್ತು ಸುಖದಾಯಕ. ಶ್ರಮವಿಲ್ಲದೇ ಬಂದ ಸಂಪತ್ತು ಬಹಳ ಕಾಲ ಉಳಿಯದು. ದೇಶವನ್ನು ಕಾಯುವ ಸೈನಿಕ ಮತ್ತು ಅನ್ನ ಕೊಡುವ ರೈತನನ್ನು ಎಂದಿಗೂ ಮರೆಯಬಾರದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ `ಸಾವಯವ ಕೃಷಿ ಒಂದು ಚಿಂತನ’ ಗೋಷ್ಠಿಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ. ನೂರಕ್ಕೆ ಎಪ್ಪತ್ತರಷ್ಟು ಜನರು ರೈತರಿದ್ದಾರೆ. ಮನುಷ್ಯನ ಉಜ್ವಲ ಭವಿಷ್ಯಕ್ಕೆ ಆಹಾರ ಆರೋಗ್ಯ ಮತ್ತು ಆಧ್ಯಾತ್ಮ ಬಹಳ ಮುಖ್ಯ. ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ ಭೂಮಿ ಬರಡಾಗುತ್ತಿದೆ. ರಾಸಾಯನಿಕ ಗೊಬ್ಬರದಿಂದ ಬೆಳೆದ ಪದಾರ್ಥಗಳ ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತವೆ. ಸತ್ವಭರಿತ ಬೆಳೆಯನ್ನು ಬೆಳೆಯಬೇಕಾದರೆ ಸಾವಯವ ಕೃಷಿಯ ಅವಶ್ಯಕತೆಯಿದೆ.
ಸಾವಯವ ಕೃಷಿಯಿಂದ ಬಂದ ಫಸಲುಗಳ ಬಳಕೆಯಿಂದ ಮನುಷ್ಯನ ಆರೋಗ್ಯ ಹೆಚ್ಚುವುದರಲ್ಲಿ ಯಾವುದೇ ಸಂದೇಹವಿಲ್ಲ.
ಸರ್ಕಾರಗಳು ಔದ್ಯೋಗಿಕ ಕ್ಷೇತ್ರಕ್ಕೆ ಕೊಡುವ ಸಹಕಾರವನ್ನು ಸಾವಯವ ಕೃಷಿ ಮಾಡುವ ರೈತನಿಗೆ ಕೊಟ್ಟರೆ ಅದ್ಭುತ ಸಾಧನೆಯನ್ನು ಮಾಡಲು ಸಾಧ್ಯ. ಮನುಷ್ಯ ಸ್ವೀಕರಿಸುವ ಆಹಾರ ವಸ್ತುಗಳು ಕಲಬೆರಕೆಯಿಂದ ಕಲುಷಿತಗೊಂಡಿವೆ. ಭೂಮಿ ಫಲವತ್ತಾಗಲು ಸಾವಯವ ಕೃಷಿಯನ್ನು ರೈತರು ಅಳವಡಿಸಿಕೊಂಡು ಉತ್ತಮ ಬೆಳೆ ಬೆಳೆದಾಗ ಯೋಗ್ಯ ಬೆಲೆಯನ್ನು ಸರ್ಕಾರ ದೊರಕಿಸಿಕೊಟ್ಟರೆ ರೈತರ ಬಾಳು ಉಜ್ವಲಗೊಳ್ಳಲು ಸಾಧ್ಯ.
ರೈತರ ಹೆಸರಿನಲ್ಲಿ ಅದೆಷ್ಟೋ ಸಂಘಟನೆಗಳಿದ್ದರೂ ನಿಶ್ಚಿತ ಫಲ ಪಡೆಯಲು ಸಾಧ್ಯವಾಗುತ್ತಿಲ್ಲವೆಂದು ಶ್ರೀ ರಂಭಾಪುರಿ ಜಗದ್ಗುರುಗಳು ವಿಷಾದ ವ್ಯಕ್ತಪಡಿಸಿದರು.
ಸಮಾರಂಭ ಉದ್ಘಾಟಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್. ಬಸವರಾಜ್ ಮಾತನಾಡಿ, ರೈತರ ಸಂಕಷ್ಟಗಳು ಬಹಳಷ್ಟಿವೆ. ಶ್ರಮದಿಂದ ದುಡಿಯುವ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ಸಕಾಲಕ್ಕೆ ಮಳೆಯಿಲ್ಲದೇ ಉತ್ತಮ ಬೆಳೆಯಿಲ್ಲದೇ ಇರುವುದು ಹಾಗೂ ಬೆಳೆದ ಬೆಳೆಗೆ ಹೆಚ್ಚಿನ ಬೆಲೆ ಸಿಗದಂತಾಗಿ ರೈತ ಸಾಲದಲ್ಲಿ ಸಿಲುಕಿ ನಲುಗುತ್ತಿದ್ದಾನೆ. ಇಂಥ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶೇಷ ಗಮನ ಹರಿಸಿ ರೈತರಿಗೆ ಹೆಚ್ಚು ಅನುಕೂಲಗಳನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಿಸಿದರು.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಸಾವಯವ ಕೃಷಿ ಪದ್ಧತಿಯನ್ನು ರೈತರು ಅಳವಡಿಸಿಕೊಳ್ಳಬೇಕು. ಪಶು ಸಂಗೋಪನೆಯಿಂದ ಬಹಳಷ್ಟು ಪ್ರಯೋಜನವಿದೆ.
ಕೊಟ್ಟಿಗೆ ಗೊಬ್ಬರ ಬಳಸುವುದರಿಂದ ಭೂಮಿಯ ಸತ್ವ ಸಮೃದ್ಧಿಗೊಂಡು ಉತ್ತಮ ಬೆಳೆ ಬರಲು ಸಾಧ್ಯವಾಗುತ್ತದೆ. ಕೃಷಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಪರವಾದ ಯೋಜನೆಗಳಿವೆ. ಅವುಗಳ ಪ್ರಯೋಜನವನ್ನು ರೈತರು ಪಡೆಯುವಂತಾಗಬೇಕೆಂದರು.
ಇನ್ನೋರ್ವ ಕೃಷಿ ತಜ್ಞ ಚಂದ್ರಶೇಖರ ನಾರಣಾಪುರ ಮಾತನಾಡಿ ನೈಸರ್ಗಿಕ ಕೃಷಿ ಮಾಡುವ ರೈತ ಎದೆಗುಂದಬಾರದು. ನೈಸರ್ಗಿಕ ಕೃಷಿಯಿಂದ ಮೊದಲು ಹೆಚ್ಚು ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ.
ಕ್ರಮೇಣ ಭೂಮಿಯ ಫಲವತ್ತತೆ ಹೆಚ್ಚಾಗಿ ಉತ್ತಮ ಬೆಳೆಯಲು ಸಾಧ್ಯವಾಗುತ್ತದೆ. ಅಲ್ಪ ಭೂಮಿಯಲ್ಲಿ ಒಳ್ಳೆ ಫಸಲು ಬೆಳೆಯಲು ಸಾಧ್ಯವೆಂಬುದನ್ನು ಸ್ವತಃ ನಾನು ಕೃಷಿ ಮಾಡಿ ಯಶಸ್ವಿಯಾಗಿದ್ದೇನೆ. ರೈತ ಸಮುದಾಯ ಜಾಗೃತಗೊಂಡು ನೈಸರ್ಗಿಕ ಕೃಷಿಯನ್ನು ಹೆಚ್ಚು ಬೆಳೆಸಲು ಮುಂದಾಗಬೇಕೆಂದರು.
 ಎಡೆಯೂರು ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿದ್ದರು. ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳು ಪ್ರಾಸ್ತಾವಿಕ ನುಡಿದರು. ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿದ್ದರು.
ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮಿಗಳು, ಚಿಕ್ಕಮಗಳೂರು ಕೂಡ್ಲಿಗೆರೆ ಎಸ್.ಹಾಲೇಶ, ಉಷಾ ಮತ್ತು ಚಂದ್ರಶೇಖರ ನಿಟ್ಟೂರು, ರೇಣುಕಾ ಮತ್ತು ಪ್ರಸನ್ನ ಕುಮಾರ್, ತವಡೆಹಳ್ಳಿ, ದಿವ್ಯಶ್ರೀ ಮತ್ತು ಶಂಕರ ಮೋಹನ್ ಶಂಕರನಹಳ್ಳಿ ಇವರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸಿದರು. ಸುಳ್ಳ, ಮಳಲಿ, ಬಿಳಕಿ, ಚನ್ನಗಿರಿ, ಸಿಂದಗಿ,ಹರಪನಹಳ್ಳಿ, ಹಂಪಸಾಗರ, ಹಿರೆಮಲ್ಲನಕೆರಿ, ಮೈನಹಳ್ಳಿ, ಅಮ್ಮಿನಬಾವಿ, ಅಡ್ನೂರು, ಸಿದ್ಧರಬೆಟ್ಟ, ಹಾರನಹಳ್ಳಿ, ಮಾವಿನಹಳ್ಳಿ ಶ್ರೀಗಳು ವೇದಿಕೆಯ ಮೆಲೆ ಇದ್ದರು.
ಚಿಕ್ಕಮಗಳೂರಿನ ತನ್ಮಯಿ ಭರತ ನಾಟ್ಯ ಪ್ರದರ್ಶಿಸಿದರು. ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನದ ಸದಸ್ಯ ಬಿ.ಎ. ಶಿವಶಂಕರ ಸ್ವಾಗತಿಸಿದರು. ಚಿಕ್ಕಮಗಳೂರು ದೇವಿ ಗುರುಕುಲದ ಡಾ. ದಯಾನಂದ ಶಾಸ್ತಿಗಳು ಭಕ್ತಿ ಗೀತೆ ಹಾಡಿದರು. ತಾವರೆಕೆರೆ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ನಿರೂಪಿಸಿದರು.
ಅಡ್ಡಪಲ್ಕಕ್ಕಿ ಮಹೋತ್ಸವ
ಸಮಾರಂಭಕ್ಕೂ ಮುನ್ನ ಶ್ರೀ ಸೋಮೇಶ್ವರ ದೇವಸ್ಥಾನದಿಂದ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದವರೆಗೆ ಶ್ರೀ ರಂಭಾಪುರಿ ಜಗದ್ಗುರುಗಳವರ ಬೆಳ್ಳಿ ಅಡ್ಡಪಲ್ಲಕ್ಕಿ ಮಹೋತ್ಸವ ಸಕಲ ವಾದ್ಯ ವೈಭವಗಳೊಂದಿಗೆ ಸಡಗರ ಸಂಭ್ರಮದಿAದ ಜರುಗಿತು. ನಂದಿಕೋಲು, ಭಜನಾ ತಂಡಗಳು ಸೇರಿದಂತೆ ವಿವಿಧ ಕಲಾ ತಂಡಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು. ಸಂಜೆ ಶ್ರೀ ವೀರಭದ್ರಸ್ವಾಮಿ ಚಿಕ್ಕರಥೋತ್ಸವ ಜರುಗಿತು.
Tags: ``Organic farming is a thought''Agricultural expert Chandrasekhara NaranapurChandrasekhara Shivacharya Swami of Hukkeri HiremathKarnataka State Farmers Association President H.R. BasavarajKshetranath Veerabhadraswamy MaharathotsavShri Jagadguru Renukacharya Jayanti YugamanotsavaSri Rambhapuri Dr. Weerasomeshwara Jagadguru
ShareSendShare
Previous Post

ಮಹಿಳೆಯರು ತಮ್ಮ ಜವಾಬ್ದಾರಿ ನಿರ್ವಹಿಸಿ

Next Post

ವಚನಗಳು ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶಿ

News Desk

News Desk

Next Post
vachana sahitya

ವಚನಗಳು ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

November 6, 2026
ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿತ; ತಾಂತ್ರಿಕ ಸಿಬ್ಬಂದಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿತ; ತಾಂತ್ರಿಕ ಸಿಬ್ಬಂದಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper