HomeKarnataka Newsಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಗಾಳಿಯಲ್ಲಿ ಗುಂಡು ಹೊಡೆಯಬೇಡಿ: ಡಿಕೆಶಿಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು!

ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಗಾಳಿಯಲ್ಲಿ ಗುಂಡು ಹೊಡೆಯಬೇಡಿ: ಡಿಕೆಶಿಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು!

For Dai;y Updates Join Our whatsapp Group

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಅಥವಾ ಸಿಬಿಐಗೆ ಪತ್ರ ಬರೆದು ತನಿಖೆಗೆ ಒತ್ತಾಯಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಅವರು, ಸ್ಟಿಂಗ್ ಆಪರೇಷನ್ ವಿಚಾರವಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಕೊನೆಗೂ ಮೌನ ಮುರಿದಿರುವುದು ಸ್ವಾಗತಾರ್ಹ. ಈ ಹಿಂದೆ ನಾವು ಕೂಡ ಅವರು ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಿದ್ದೆವು. ಬಹುಶಃ ನಮ್ಮ ಮಾತು ಅವರಿಗೆ ಕೇಳಿಸಿರಬಹುದು ಎಂದು ವ್ಯಂಗ್ಯವಾಡಿದರು.

ಸ್ಟಿಂಗ್ ಆಪರೇಷನ್ ವಿವಾದದ ಹಿಂದಿರುವ ಸತ್ಯ ಹೊರಬರಬೇಕಾದರೆ ಸರ್ಕಾರವೇ ಸಿಬಿಐ ತನಿಖೆಗೆ ಮುಂದಾಗಬೇಕು. ಕಾಂಗ್ರೆಸ್ ನಾಯಕರೇ ತಮ್ಮ ಪಕ್ಷದ ನಾಯಕರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಿ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ನಾರಾಯಣಸ್ವಾಮಿ ಆರೋಪಿಸಿದರು. ಈ ವಿಚಾರದಲ್ಲಿ ಕೇವಲ ಹೇಳಿಕೆಗಳನ್ನು ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಸಮಗ್ರ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ದೇಶದ ಭದ್ರತೆ ಹಾಗೂ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಮಾತನಾಡಿದ ಅವರು, ದೇಶದ ಒಳಗೂ ಹೊರಗೂ ಭಾರತವನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಸಂವಿಧಾನದ ಆಶಯಗಳಿಗೆ ಬದ್ಧವಾಗಿರಬೇಕಾದ ರಾಜಕೀಯ ಪಕ್ಷಗಳೇ ಅಸಂವಿಧಾನಿಕ ನಡವಳಿಕೆ ತೋರುತ್ತಿವೆ ಎಂದು ಟೀಕಿಸಿದರು.

ಭಾರತವು ಜಾಗತಿಕ ಮಟ್ಟದಲ್ಲಿ ತನ್ನ ಅಸ್ತಿತ್ವ ಮತ್ತು ಪ್ರಭಾವವನ್ನು ಬಲಪಡಿಸಿಕೊಳ್ಳುತ್ತಿದೆ. ಹಲವು ರಾಷ್ಟ್ರಗಳು ತಮ್ಮ ಆರ್ಥಿಕ ಹಾಗೂ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಭಾರತವೂ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.

ದೇಶದ ಆರ್ಥಿಕ ವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿದ್ದು, ಜಿಡಿಪಿ ಬೆಳವಣಿಗೆ ಶೇ.7.5ಕ್ಕೆ ತಲುಪಿದೆ ಎಂದು ನಾರಾಯಣಸ್ವಾಮಿ ಪ್ರತಿಪಾದಿಸಿದರು. ಆಟೊಮೊಬೈಲ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ ಮುನ್ನಡೆಯುತ್ತಿದೆ. ದೇಶದ ಆರ್ಥಿಕ ಹಾಗೂ ರಕ್ಷಣಾ ಸಾಮರ್ಥ್ಯ ಹೆಚ್ಚುತ್ತಿರುವುದರಿಂದ ಕೆಲವು ವಿದೇಶಿ ಶಕ್ತಿಗಳು ಭಾರತದ ಪ್ರಗತಿಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಸೇನಾ ಸಾಮರ್ಥ್ಯವನ್ನು ಬಲಪಡಿಸಲಾಗಿದೆ. ರಾಷ್ಟ್ರೀಯ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದರೆ ದೇಶದ ಪರಿಸ್ಥಿತಿ ಹೇಗಿರುತ್ತಿತ್ತು ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಟೀಕಿಸಿದರು.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img