ಬೆನ್ನು ನೋವಿನ ಸಮಸ್ಯೆ: ಚಾಂಪಿಯನ್ಸ್ ಟ್ರೋಫಿಯಲ್ಲೂ ಜಸ್​ಪ್ರೀತ್ ಬುಮ್ರಾ ಆಡೋದು ಡೌಟ್!

0
Spread the love

ಬೆನ್ನಿನ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ಜಸ್​ಪ್ರೀತ್ ಬುಮ್ರಾ ಅವರು, ಚಾಂಪಿಯನ್ಸ್ ಟ್ರೋಫಿಯಲ್ಲೂ ಕಣಕ್ಕಿಳಿಯೋದು ಡೌಟ್ ಎನ್ನಲಾಗಿದೆ.

Advertisement

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿರುವ ಜಸ್​ಪ್ರೀತ್ ಬುಮ್ರಾ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಇದೀಗ ಜಸ್​ಪ್ರೀತ್ ಬುಮ್ರಾ ಅವರ ಬೆನ್ನು ನೋವಿನ ಸಮಸ್ಯೆಯನ್ನು ಗ್ರೇಡ್-1 ಎಂದು ಪರಿಗಣಿಸಲಾಗಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಅವರು ಸಂಪೂರ್ಣ ಹೊರಗುಳಿಯಲಿದ್ದಾರೆ. ಈ ವಿಶ್ರಾಂತಿಯ ಬಳಿಕ ಮತ್ತೊಮ್ಮೆ ಅವರು ವೈದ್ಯಕೀಯ ಪರೀಕ್ಷೆಗೆ ಒಳಪಡಲಿದ್ದಾರೆ.

ವಿಶ್ರಾಂತಿಯ ಬಳಿಕ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಂಡರೆ ಮಾತ್ರ ಬುಮ್ರಾ ಚಾಂಪಿಯನ್ಸ್​ ಟ್ರೋಫಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಒಂದು ವೇಳೆ ಅವರ ಬೆನ್ನು ನೋವಿನ ಸಮಸ್ಯೆಯು ಗ್ರೇಡ್-2 ಆಗಿ ಮಾರ್ಪಟ್ಟರೆ ಕನಿಷ್ಠ 6 ವಾರಗಳ ಕಾಲ ಮೈದಾನದಿಂದ ಹೊರಗುಳಿಯಬೇಕಾಗುತ್ತದೆ.


Spread the love

LEAVE A REPLY

Please enter your comment!
Please enter your name here