ಹಾಸನ:- ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನ ಕಣದಹಳ್ಳಿ ಗ್ರಾಮದಲ್ಲಿ ಜರುಗಿದೆ.
Advertisement
ಹಳೇಪಾಳ್ಯ ಗ್ರಾಮದ ನಿವಾಸಿ 21 ವರ್ಷದ ರಕ್ಷಿತಾ ಮೃತ ಮಹಿಳೆ. ಮೃತ ರಕ್ಷಿತಾ ಮೂರು ವರ್ಷದ ಹಿಂದೆ ಅದೇ ಗ್ರಾಮದ ಪುನೀತ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು. ಆದರೆ ವಿವಾಹದ ಬಳಿಕ ಪತಿ ಮನೆಯವರು ವರದಕ್ಷಿಣೆ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದರು. ಇದರಿಂದ ಮನನೊಂದಿದ್ದ ರಕ್ಷಿತಾ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.