ವರದಕ್ಷಿಣೆ ಕಿರುಕುಳ: ಮನನೊಂದು ವಿಷ ಸೇವಿಸಿ ಗೃಹಿಣಿ ಸೂಸೈಡ್!

0
Spread the love

ಲಕ್ನೋ:- ಉತ್ತರಪ್ರದೇಶದ ಬಾಗ್‌ಪತ್‌ನಲ್ಲಿ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಮನೀಷಾ (28) ಮೃತ ಮಹಿಳೆ.

Advertisement

ಆತ್ಮಹತ್ಯೆಗೂ ಮುನ್ನ ಆಕೆ ತೋಳು, ಕಾಲು ಹಾಗೂ ಹೊಟ್ಟೆಯ ಮೇಲೆ ನನ್ನ ಸಾವಿಗೆ ಪತಿ ಹಾಗೂ ಅತ್ತೆಯೇ ಕಾರಣ ಎಂದು ಬರೆದುಕೊಂಡಿದ್ದಾರೆ. ಮನೀಷಾ 2023ರಲ್ಲಿ ನೋಯ್ಡಾ ನಿವಾಸಿ ಕುಂದನ್ ಅವರನ್ನು ವಿವಾಹವಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ಪತಿ ಹಾಗೂ ಅತ್ತೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಬರೆದಿದ್ದಾರೆ.

ಅಲ್ಲದೇ ಮನೀಷಾ ವೀಡಿಯೋ ಮೂಲಕವು ಕಿರುಕುಳದ ಕ್ರೂರತೆ ಬಗ್ಗೆ ವಿವರಿಸಿದ್ದಾರೆ. ಈ ವೀಡಿಯೋ ಕ್ಲಿಪ್‌ನಲ್ಲಿ ಮನೀಷಾ ಅಳುತ್ತಾ ತನ್ನ ಪತಿ, ಅವರ ತಾಯಿ, ತಂದೆ ಮತ್ತು ಸಹೋದರ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.

ಮದುವೆ ಸಂದರ್ಭದಲ್ಲಿ ಮನೀಷಾ ಕುಟುಂಬಸ್ಥರು 20 ಲಕ್ಷ ರೂ. ಖರ್ಚು ಮಾಡಿದ್ದರು. ಅಲ್ಲದೇ ವರದಕ್ಷಿಣೆಯಾಗಿ ಬುಲೆಟ್ ಬೈಕ್ ಸಹ ನೀಡಿದ್ದರು. ಆದರೆ ಪತಿ ಮನೆಯವರು ಪದೇ ಪದೇ ಕಾರು ಮತ್ತು ಹಣವನ್ನು ಕೇಳುತ್ತಿದ್ದರು ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here