ವಿಜಯಸಾಕ್ಷಿ ಸುದ್ದಿ, ಗದಗ: ತ್ರಿವಿಧ ದಾಸೋಹಿಗಳು, ಕನ್ನಡದ ಕುಲಗುರುಗಳೆಂದೇ ಖ್ಯಾತರಾದ ಲಿಂ. ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ 76ನೇ ಜಯಂತಿ ಅಂಗವಾಗಿ ಭಾವೈಕ್ಯತಾ ದಿನಾಚರಣೆ, ಗ್ರಂಥ ಬಿಡುಗಡೆ ಹಾಗೂ ಸಂಮಾನ ಸಮಾರಂಭ ಫೆ.21ರಂದು ಬೆಳಿಗ್ಗೆ 10.30ಕ್ಕೆ ನಗರದ ತೋಂಟದಾರ್ಯ ಮಠದಲ್ಲಿ ಜರುಗಲಿದೆ.
ಬೆಳಿಗ್ಗೆ 8.30 ಗಂಟೆಗೆ ಭೀಷ್ಮಕೆರೆಯ ಮಹಾತ್ಮ ಬಸವೇಶ್ವರ ಪುತ್ಥಳಿಯಿಂದ ಶ್ರೀಮಠದ ವರೆಗೆ ಭಾವೈಕ್ಯತಾ ಯಾತ್ರೆ ಜರುಗಲಿದೆ. ಯಾತ್ರೆಯ ಉದ್ಘಾಟನೆಯನ್ನು ಮಾಜಿ ಶಾಸಕರಾದ ಡಿ.ಆರ್. ಪಾಟೀಲ ನೆರವೇರಿಸುವರು.
ಅಧ್ಯಕ್ಷತೆಯನ್ನು ಕಾನೂನು-ಸಂಸದೀಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ. ಪಾಟೀಲ ವಹಿಸುವರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಭೀಮವ್ವ ಶಿಳ್ಳೆಕ್ಯಾತರ ಅವರನ್ನು ಸಂಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ರಮೇಶ ಜಿಗಜಿಣಗಿ, ಶಾಸಕರಾದ ಜಿ.ಎಸ್. ಪಾಟೀಲ, ಸಿ.ಸಿ. ಪಾಟೀಲ, ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಉಪವಿಭಾಗಾಧಿಕಾರಿಗಳಾದ ಮಹೇಶ ಮಾಲಗಿತ್ತಿ, ಸಾಹಿತಿಗಳಾದ ರಂಜಾನ್ ದರ್ಗಾ, ವೈದ್ಯರಾದ ಡಾ. ಸೊಲೊಮನ್, ಮಾಜಿ ಸಚಿವರಾದ ಎಸ್.ಎಸ್. ಪಾಟೀಲ, ಕಳಕಪ್ಪ ಬಂಡಿ, ಮಾಜಿ ಸಂಸದರಾದ ಐ.ಜಿ. ಸನದಿ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ ಆಗಮಿಸುವರು.
ಲಿಂಗೈಕ್ಯ ಗುರುಗಳ ಕುರಿತಾದ ಭೋಜರಾಜ ಸೊಪ್ಪಿಮಠ ವಿರಚಿತ `ಕರುಣಾಮಯಿ ಭಾಗ-3’ ಹಾಗೂ ಡಾ. ಮಂಜುನಾಥ ಬಮ್ಮನಕಟ್ಟಿ ವಿರಚಿತ ಗೋಕಾಕ ಚಳುವಳಿ ಮತ್ತು ಕನ್ನಡ ಅಭಿವೃದ್ಧಿ ಗ್ರಂಥಗಳು ಲೋಕಾರ್ಪಣೆಗೊಳ್ಳುವವು. ಈ ಕಾರ್ಯಕ್ರಮಕ್ಕೆ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಅಭಿಮಾನಿಗಳು ಮತ್ತು ಶ್ರೀಮಠದ ಸದ್ಭಕ್ತರು ಆಗಮಿಸಬೇಕೆಂದು ಶ್ರೀಮಠದ ಆಡಳಿತಾಧಿಕಾರಿಗಳಾದ ಪ್ರೊ. ಶಿವಾನಂದ ಪಟ್ಟಣಶೆಟ್ಟರ ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದ್ದಾರೆ.
ಭಾವೈಕ್ಯತಾ ಯಾತ್ರೆಯ ನಂತರ ಶ್ರೀಮಠದಲ್ಲಿ ಜರುಗುವ ವೇದಿಕೆ ಕಾರ್ಯಕ್ರಮದ ಸಾನ್ನಿಧ್ಯವನ್ನು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸುವರು. ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು. ನಿಜಗುಣಪ್ರಭು ತೋಂಟದಾರ್ಯ ಶ್ರೀಗಳು, ಭೈರನಟ್ಟಿ-ಶಿರೋಳದ ಶಾಂತಲಿAಗ ಶ್ರೀಗಳು, ಸಂಡೂರು ವಿರಕ್ತಮಠದ ಪ್ರಭು ಶ್ರೀಗಳು, ಅರಸಿಕೆರೆಯ ಶಾಂತಲಿಂಗ ದೇಶಿಕೇಂದ್ರ ಶ್ರೀಗಳು, ಕೋರಣೇಶ್ವರ ಶ್ರೀಗಳು ಸಮ್ಮುಖ ವಹಿಸುವರು.