ಗದಗ: ಲಂಚ ಪ್ರಕರಣದಲ್ಲಿ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಬಂಧನವಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ಪಟ್ಟಣದಲ್ಲಿ ಅವರ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಶಾಸಕರ ಬಂಧನವನ್ನು ಖಂಡಿಸಿ ಅಭಿಮಾನಿಗಳು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಲಕ್ಷ್ಮೇಶ್ವರದ ಸೋಮೇಶ್ವರ ತೇರಿನಲ್ಲಿರುವ ಮನೆಯಿಂದ ಆರಂಭವಾದ ರ‍್ಯಾಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ವಿರುದ್ಧದ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಅಲ್ಲದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.



