ವಿಜಯಸಾಕ್ಷಿ ಸುದ್ದಿ, ಧಾರವಾಡ: ಬೀದರ್ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಈಶ್ವರ ಉಳ್ಳಾಗಡ್ಡಿ ಅವರನ್ನು ಧಾರವಾಡ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಬೀದರ್ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದ ಡಾ.ಈಶ್ವರ ಉಳ್ಳಾಗಡ್ಡಿ ಅವರನ್ನು ಧಾರವಾಡ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರನ್ನಾಗಿ ನೇಮಿಸಿದ ಸರಕಾರದ ಆದೇಶವನ್ನು ಗದಗ ಜಿಲ್ಲಾ ಯುಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ಮೆಟಗುಡ್ಡ ಸ್ವಾಗತಿಸಿ, ಅಭಿನಂಧಿಸಿದ್ದಾರೆ.



