ಬೆಂಗಳೂರು: ಇವತ್ತಿನ ರಾಜ್ಯಾಧ್ಯಕ್ಷ ಮಿಸ್ಟರ್ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ ಎಂದು ಚಿಕ್ಕಬಳ್ಳಾಪುರ ಸಂಸದ ಕೆ ಸುಧಾಕರ್ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಭಿನ್ನಮತದ ನಡುವೆ ಸಂಸದ ಕೆ.ಕೆ ಸುಧಾಕರ್ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹೌದು ಬೆಂಗಳೂರಿನಲ್ಲಿ ಮಾತನಾಡಿದ ಅವರು,
ಜಿಲ್ಲಾಧ್ಯಕ್ಷರ ನೇಮಕದಲ್ಲಿ ವಿಜಯೇಂದ್ರ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದ ಆರೋಪಿಸಿದ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಸುಧಾಕರ್ ಅವರು, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಒಂದು ಸೀಟು ಗೆಲ್ಲಿ ನೋಡೋಣ ಎಂದು ಕೆ. ಸುಧಾಕರ್ ಅವರು ವಿಜಯೇಂದ್ರ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಇನ್ನೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ ವಾಲ್ ನನ್ನ ಜೊತೆ ಮಾತನಾಡಿದ್ದಾರೆ. ನಿಮಗೆ ಅನ್ಯಾಯ ಆಗೋಕೆ ಬಿಡಲ್ಲ ಅಂದಿದ್ದಾರೆ. ಕೋರ್ ಕಮಿಟಿಯಲ್ಲಿ ಚಿಕ್ಕಬಳ್ಳಾಪುರ ಸೇರಿ 13 ಜಿಲ್ಲೆಗಳ ಆಯ್ಕೆ ಪ್ರಸ್ತಾಪಿಸಿಲ್ಲ ಎಂದು ತಿಳಿಸಿದರು.