ಬೆಂಗಳೂರು:- ರಾಜ್ಯ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೂತನ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಿಸಿ ಆದೇಶ ಹೊರಡಿಸಿದೆ.
ಡಾ.ಎಂ.ಎ.ಸಲೀಂ ಅವರನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸುವ ರಾಜ್ಯ ಸರಕಾರದ ನಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೆ, ಅವರನ್ನು ಡಿಜಿ-ಐಜಿಪಿಯಾಗಿ ನೇಮಿಸಿ ಶನಿವಾರದಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಕೆ.ವಿ.ಅಶೋಕ್ ಅಧಿಸೂಚನೆ ಹೊರಡಿಸಿದ್ದಾರೆ.
ಅಪರಾಧ ತನಿಖಾ ವಿಭಾಗ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ವಿಭಾಗದ ಡಿಜಿಪಿಯಾಗಿರುವ ಡಾ.ಎಂ.ಎ.ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಐಪಿಎಸ್ ನಿಯಮಗಳು, 2016ರ ವೇತನ ಮ್ಯಾಟ್ರಿಕ್ಸ್ ಪ್ರಕಾರ ಮಾಸಿಕ 2,25,000ರೂ.ವೇತನ ನಿಗದಿಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



