ವಿಜಯಸಾಕ್ಷಿ ಸುದ್ದಿ, ಗದಗ: ಕಪ್ಪತ್ತಗಿರಿ ಫೌಂಡೇಶನ್ (ರಿ), ಕಳಸಾಪೂರ–ಗದಗ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಶಿಕ್ಷಕರ ಸಮ್ಮೇಳನ ಆಯೋಜಿಸಲಾಗುತ್ತಿದೆ.
ಸಮ್ಮೇಳನದ ಅಂಗವಾಗಿ ರಾಜ್ಯಮಟ್ಟದ ವಿಚಾರ ಸಂಕಿರಣ, ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಈ ವರ್ಷದ ಶಿಕ್ಷಕರ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮುಂಡರಗಿಯ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಹಾಗೂ ಮಕ್ಕಳ ಸಾಹಿತಿ ಡಾ. ನಿಂಗು ಸೊಲಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಪ್ಪತ್ತಗಿರಿ ಫೌಂಡೇಶನ್ನ ಸಂಸ್ಥಾಪಕ ಅಧ್ಯಕ್ಷೆ ಚಂದ್ರಕಲಾ ಎಂ. ಇಟಗಿಮಠ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ನಿಂಗು ಸೊಲಗಿ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಕಪ್ಪತ್ತಗಿರಿ ಫೌಂಡೇಶನ್ನ ಸಂಸ್ಥಾಪಕ ಅಧ್ಯಕ್ಷೆ ಚಂದ್ರಕಲಾ ಎಂ. ಇಟಗಿಮಠ, ತೋಟಯ್ಯ ಗುಡ್ಡಿಮಠ, ಕಾವ್ಯಾ ಅಂಗಡಿ, ಮಂಜುನಾಥ ಮುಧೋಳ ಹಾಗೂ ಚಂದ್ರಶೇಖರ ಮಜ್ಜಗಿ ಉಪಸ್ಥಿತರಿದ್ದರು.



