ಪಶ್ಚಿಮ ಪದವೀಧರ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಡಾ, ಸಲೀಮ್ ಸೊನ್ನೆ ಖಾನ್ ಅರ್ಜಿ

0
Spread the love

ಧಾರವಾಡ: ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರು ಮಾಡಿರುವ ಡಾ, ಸಲೀಮ್ ಸೊನ್ನೆಖಾನ್ ಪಶ್ಚಿಮ ಪದವೀಧರ ಮತಕ್ಷೇತ್ರದಿಂದ ನಡೆಯುವ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Advertisement

ಸಲೀಮ್ ಸೊನ್ನೆಖಾನ ಅವರು ಕಳೆದ 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದು, ಪಕ್ಷವನ್ನು ಕೆಳಮಟ್ಟದಿಂದ ಸಂಘಟನೆ ಮಾಡಿದ್ದಾರೆ. ಅಲ್ಲದೇ ನಿರುದ್ಯೋಗಿ ಪದವೀಧರರಿಗೆ ಅನುಕೂಲ ಕಲ್ಪಿಸಿದ್ದಾರೆ.

ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ ಸ್ಪರ್ಧಿಸಲು ಕಳೆದ ಒಂದು ವರ್ಷದಿಂದ ತಯಾರಿ ನಡೆಸಿದ್ದಾರೆ. ಗದಗ, ಹಾವೇರಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮದೇ ಆದ ಗೆಳೆಯರ ಬಳಗ ಹಾಗೂ ಅಭಿಮಾನಿಗಳನ್ನು ಹೊಂದಿರುವ ಡಾ, ಸಲೀಮ್ ಸೊನ್ನೆಖಾನ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟಲ್ಲಿ ಗೆಲುವು ತಂದು ಕೊಡುವ ಸಾಮರ್ಥ್ಯ ಹೊಂದಿರುವದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಅಲ್ತಾಪ್ ಹಳ್ಳೂರಗೆ ಅರ್ಜಿ ಸಲ್ಲಿಸಿ ಡಾ, ಸಲೀಮ್ ಸೊನ್ನೆಖಾನ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನುವು ಮಾಡಿಕೊಡಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ವಕೀಲರಾದ ಅಲೀಮ್ ಪಠಾಣ್, ಮೆಹಬೂಬ್ ರಾಮದುರ್ಗ, ಇಸಾಖ್ ತಮಟಗಾರ, ಎಸ್ ಎಸ್ ಸೌದಾಗರ್, ದಸ್ತಗಿರ ತರಡೆ, ಬಸವರಾಜ ಗೂಳ್ಳೊಳ್ಳಿ, ಚೇತನ ಆಚಾರ್ಯ, ದಾವಲಸಾಬ ನಾಡಮ್ಮನವರ, ಮಾಜ್ ಮುಜಾವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here