HomeGadag Newsರಾಜಕಾರಣ ಬದಿಗಿಟ್ಟು ಸೇವೆ ಸಲ್ಲಿಸಿದ ಡಾ. ಸಿಂಗ್: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ್

ರಾಜಕಾರಣ ಬದಿಗಿಟ್ಟು ಸೇವೆ ಸಲ್ಲಿಸಿದ ಡಾ. ಸಿಂಗ್: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಖ್ಯಾತ ಅರ್ಥಶಾಸ್ತçಜ್ಞ ಎಂದೇ ಖ್ಯಾತರಾಗಿದ್ದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ ಸಿಂಗ್ ಅವರು ಡಿಸೆಂಬರ್ ೨೬, ಗುರುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಗಲಿದ ಹಿರಿಯರಿಗೆ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮನಮೋಹನ್ ಸಿಂಗ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ, ಶೃದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ್, ಪ್ರಧಾನಮಂತ್ರಿ ಹುದ್ದೆಯನ್ನು ಪ್ರತಿಯೊಬ್ಬರೂ ನಾಯಕತ್ವದ ಸ್ಥಾನ, ರಾಜಕೀಯದ ಅತೀ ದೊಡ್ಡ ಸ್ಥಾನ ಎಂದೇಭಾವಿಸುತ್ತಾರೆ. ಆದರೆ, ಮನಮೋಹನ್ ಸಿಂಗ್ ಅವರು ಅದೊಂದು ಸರ್ಕಾರಿ ನೌಕರಿ ಎಂದು ಭಾವಿಸಿ ಸಮರ್ಪಕ ಆಡಳಿತ ನಡೆಸಿದ್ದರು. ರಾಜಕಾರಣ ಬದಿಗಿಟ್ಟು ಅವರು ದೇಶಕ್ಕಾಗಿ ಸೇವೆ ಸಲ್ಲಿಸಿದ್ದರು. ಅಂದಿನ ರಾಜಕೀಯದಲ್ಲಿ ಮನಮೋಹನ್ ಸಿಂಗ್ ಬಗ್ಗೆ ವಿರೋಧ ಪಕ್ಷದವರು ಹಲವಾರು ಟೀಕೆಗಳನ್ನು ಮಾಡಿದರೂ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ದೇಶದ ಕಾಯಕದಲ್ಲಿ ತೊಡಗಿದ್ದರು ಎಂದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನೀಲಮ್ಮ ಬೋಳನವರ ಮಾತನಾಡಿ, ಆರ್ಥಿಕ ತಜ್ಞರಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರೈತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಅವರ ಸಾಧನೆ ಇಂದಿಗೂ ಅಜರಾಮರವಾಗಿದೆ. ಅವರ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಆರ್ಥಿಕ ತಜ್ಞರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿಯನ್ನಾಗಿ ಮಾಡಿತ್ತು. ೧೦ ವರ್ಷದ ಅವರ ಆಡಳಿತದಲ್ಲಿ ಭಾರತ ಉತ್ಯುನ್ನತ ಸ್ಥಾನದಲ್ಲಿ ಏರಿಕೆ ಕಂಡಿತ್ತು. ಅವರ ಅಗಲಿಕೆ ಇಡೀ ಜಗತ್ತಿಗೆ ದೊಡ್ಡ ನಷ್ಟವಾಗಿದೆ ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ದೇಶ ಕಂಡ ಅತ್ಯಂತ ಮುಗ್ಧ ಮನಸ್ಸಿನ ರಾಜಕಾರಣಿಗಳಲ್ಲಿ ಮನಮೋಹನ್ ಸಿಂಗ್ ಪ್ರಮುಖರಾಗಿದ್ದು, ರೈತರ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದರು. ೭೨ ಸಾವಿರ ಕೋಟಿ ರೂ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರ ಬೆನ್ನೆಲುಬಾಗಿ ನಿಂತಿದ್ದರು. ದೇಶದಲ್ಲಿ ಆಧಾರ್ ಕಾರ್ಡ್ ವ್ಯವಸ್ಥೆಯನ್ನು ಜಾರಿಗೆ ತಂದ ಕೀರ್ತಿ ಮನಮೋಹನ್ ಸಿಂಗ್‌ಗೆ ಸಲ್ಲುತ್ತದೆ. ಅವರ ಅಗಲಿಕೆಯು ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.

ಕಾAಗ್ರೆಸ್ ಹಿರಿಯ ಮುಖಂಡ ಎಸ್.ಎನ್. ಬಳ್ಳಾರಿ ಮಾತನಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವೃತ್ತಿಪರ ರಾಜಕಾರಣಿ ಆಗಿರಲಿಲ್ಲ. ಅವರೊಬ್ಬ ಆರ್ಥಿಕ ತಜ್ಞರಾಗಿದ್ದರು. ಆದರೆ, ಅನಿವಾರ್ಯವಾಗಿ ಅವರು ರಾಜಕಾರಣಕ್ಕೆ ಬಂದು ನಾಲ್ಕು ದಶಕದ ಹಿಂದೆ ದೇಶದ ಆರ್ಥಿಕತೆಯನ್ನು ಬದಲಾಯಿಸಿದರು. ದೇಶದ ಅಭಿವೃದ್ಧಿಯ ಶ್ರೆಯಸ್ಸು ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ. ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟವಾಗಿದ್ದು, ದೇವರು ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಬಸವರಾಜ ಅಸೂಟಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಮರ್ ಫಾರೂಕ್ ಹುಬ್ಬಳ್ಳಿ, ಮಹಮ್ಮದ್ ಶಾಲಗಾರ, ಮುಖಂಡರಾದ ಶ್ರೀನಿವಾಸ ಹುಯಿಲಗೋಳ, ವಿನೋದ ಶಿದ್ಲಿಂಗ್, ಮೋಹನ್ ದೊಡಕುಂಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಮನಮೋಹನ್ ಸಿಂಗ್ ವಿದೇಶ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಪತ್ರಿಕಾಗೋಷ್ಠಿ ನಡೆಸಿ ಸಂಪೂರ್ಣ ಮಾಹಿತಿಯನ್ನು ಮಾಧ್ಯಮದವರ ಮುಂದೆ ಹಂಚಿಕೊಳ್ಳುತ್ತಿದ್ದರು. ಅತೀ ಹೆಚ್ಚು ಪತ್ರಿಕಾಗೋಷ್ಠಿಯನ್ನು ನಡೆಸಿದ ಕೀರ್ತಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಸಲ್ಲುತ್ತದೆ. ಅಲ್ಲದೇ ಡಾ. ಅಂಬೇಡ್ಕರ್ ಬಗ್ಗೆ ಅವರಿಗೆ ಅಪಾರ ಗೌರವವಿತ್ತು. ತಮ್ಮ ಸೇವೆಯನ್ನು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಮೀಸಲಿಟ್ಟಿದ್ದರು. ಅವರ ನಡೆ, ರಾಜಕೀಯ ನಿಲುವು, ಮಾರ್ಗದರ್ಶನ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಮೇಲಿರಲಿ. ಅವರ ಅಗಲಿಕೆ ದೇಶಕ್ಕೆ ದೊಡ್ಡ ನಷ್ಟವಾಗಿದ್ದು, ಅವರ ಸ್ಥಾನವನ್ನು ಮತ್ತೊಬ್ಬ ರಾಜಕಾರಣಿ ತುಂಬಲಾರರು ಎಂದು ಕೃಷ್ಣಗೌಡ ಪಾಟೀಲ್ ಅಭಿಪ್ರಾಯಪಟ್ಟರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!