ವಿಜಯಸಾಕ್ಷಿ ಸುದ್ದಿ, ಗದಗ : ಗದಗ ತಾಲೂಕಿನ ಮುಳಗುಂದ ಪಟ್ಟಣದ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಗದುಗಿನ ಶ್ರೀ ಕುಮಾರೇಶ್ವರ ಕೃಪಾಪೋಷಿತ ಪಂ.ಪಂಚಾಕ್ಷರ ಗವಾಯಿಗಳವರ ನಾಟ್ಯ ಸಂಘ ನಾಟಕ ಪ್ರಾರಂಭೋತ್ಸವ ಸಮಾರಂಭದಲ್ಲಿ ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತರಾದ ಸಿದ್ದೇಶ್ವರ ಶಾಸ್ತ್ರಿಗಳು ತೆಲ್ಲೂರ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಧಾರವಾಡ ಮುರುಘಾಮಠ ಹಾಗೂ ಮುಳಗುಂದ ಗವಿಮಠದ ಪೂಜ್ಯ ಮಲ್ಲಿಕಾರ್ಜುನ ಮಹಾಸ್ವಾಮಿಗಳು ತೆಲ್ಲೂರರನ್ನು ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ತೆಲ್ಲೂರ ಶಾಸ್ತ್ರಿಗಳು, ಶ್ರೀ ಕುಮಾರೇಶ್ವರ ಕೃಪಾಪೋಷಿತ ಪಂ.ಪಂಚಾಕ್ಷರ ಗವಾಯಿಗಳವರ ನಾಟ್ಯ ಸಂಘ ನಾಡಿನಾದ್ಯಂತ ಸಂಚರಿಸಿ ರಂಗಕಲೆಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದೆ. ಇಂದಿನ ಆಧುನಿಕ ದಿನಗಳಲ್ಲಿಯೂ ಜನರಲ್ಲಿ ನಾಟಕ ಅಭಿರುಚಿಯನ್ನು ಹೆಚ್ಚಿಸುವಲ್ಲಿ ಈ ನಾಟ್ಯ ಸಂಘ ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದೆ ಎಂದರು.
ಮುಖ್ಯ ಅತಿಥಿಗಳಾಗಿ ಗಣ್ಯರಾದ ಎಸ್.ಎಂ. ನೀಲಗುಂದ, ಎಂ.ಡಿ. ಬಟ್ಟೂರ, ಶಿವಪ್ರಕಾಶ ಮಹಾಜನಶೆಟ್ರ, ಮಹೇಶ ಬಡ್ನಿ, ಡಾ. ಎಸ್.ಸಿ. ಚವಡಿ, ರಾಜಣ್ಣ ಜೇವರ್ಗಿ, ಎಲ್.ಬಿ. ಶೇಖ ಮಾಸ್ತರ ಆಗಮಿಸಿದ್ದರು. ನಾಟಕ ಕಂಪನಿ ವ್ಯವಸ್ಥಾಪಕ ಮಹಾದೇವ ಗುಟ್ಲಿ, ಕಾರ್ಯದರ್ಶಿ ನೂರುದ್ದೀನ್ ವಣಗೇರಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.