ಶಾಲಾ ವಾಹನ ಡ್ರೈವರ್ʼಗಳ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ: 118 ಚಾಲಕರ ವಿರುದ್ಧ ಪ್ರಕರಣ ದಾಖಲು

0
Spread the love

ಬೆಂಗಳೂರು: ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರವನ್ನು ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಈ ಹಿಂದೆ ಕಡ್ಡಾಯಗೊಳಿಸಿತ್ತು. ಇದೀಗ ಶಾಲಾ ವಾಹನ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಹೌದು ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಬೆಂಗಳೂರಿನ 118 ಶಾಲಾ ಬಸ್ ಚಾಲಕರ ವಿರುದ್ಧ ಕೇಸ್​ ದಾಖಲಾಗಿದ್ದು, ಪರವಾನಗಿ ರದ್ದು ಮಾಡಲಾಗಿದೆ.

Advertisement

ಈ ಬಗ್ಗೆ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದು, ಜನವರಿಯಲ್ಲಿ 16​, ಫೆಬ್ರವರಿಯಲ್ಲಿ 7, ಜುಲೈನಲ್ಲಿ 23, ಆಗಸ್ಟ್​ನಲ್ಲಿ 26, ಸೆಪ್ಟೆಂಬರ್​ನಲ್ಲಿ 22, ನವೆಂಬರ್​ನಲ್ಲಿ 24 ಪ್ರಕರಣ ದಾಖಲಾಗಿವೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಕಳೆದ 10 ತಿಂಗಳಲ್ಲಿ 20 ಸಾವಿರಕ್ಕಿಂತ ಹೆಚ್ಚು ಶಾಲಾ ವಾಹನಗಳನ್ನು ಪರಿಶೀಲನೆ ನಡೆಸಲಾಗಿದೆ. ಪರಿಶೀಲನೆ ವೇಳೆ ನಿಯಮ ಮೀರಿ ಬಸ್​ನಲ್ಲಿ ಹೆಚ್ಚುವರಿ ಶಾಲಾ ಮಕ್ಕಳ ಸಾಗಾಟ ಮಾಡಿದ್ದು ಕೂಡ ತಿಳಿದು ಬಂದಿದೆ. ಈ ಕುರಿತು ಪ್ರಕರಣ ​ದಾಖಲಾಗಿದೆ.

ಮಕ್ಕಳ ಸುರಕ್ಷತೆಗೆ ಹೊಸ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ಶಾಲಾ ವಾಹನಗಳಲ್ಲಿ ಕಾರ್ಯ ನಿರ್ವಹಿಸುವ ಚಾಲಕರು ಹಾಗೂ ಸಹಾಯಕರಿಂದ ಮಕ್ಕಳ ಮೇಲೆ ದೌರ್ಜನ್ಯ ಆಗುತ್ತಿದೆ ಎಂಬ ಪ್ರಕರಣ ಸಂಬಂಧ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಮಕ್ಕಳ ಸುರಕ್ಷತೆಯ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮಕ್ಕೆ ಈ ಹಿಂದೆ ಶಿಕ್ಷಣ ಇಲಾಖೆ ಮಕ್ಕಳ ಸುರಕ್ಷತೆ ನಿಟ್ಟಿನಲ್ಲಿ ಹೊಸ ಸುತ್ತೋಲೆಯನ್ನು ಹೊರಡಿಸಿತ್ತು. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಎಲ್ಲಾ ಚಾಲಕರು ಪೊಲೀಸ್ ಠಾಣೆಗಳಿಂದ ಅವರ ನಡತೆಯ ಬಗ್ಗೆ ನಡವಳಿಕೆ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಲು ಶಿಕ್ಷಣ ಇಲಾಖೆ ಆದೇಶಿಸಿತ್ತು.

 


Spread the love

LEAVE A REPLY

Please enter your comment!
Please enter your name here